ಕಮಲೇಶ್ ಬಾಲ್ಮಿಕಿ 
ದೇಶ

ಉತ್ತರ ಪ್ರದೇಶ: ಮಾಜಿ ಸಂಸದ ಕಮಲೇಶ್ ಬಾಲ್ಮಿಕಿ ಅನುಮಾನಾಸ್ಪದ ಸಾವು

ಸಮಾಜವಾದಿ ಪಕ್ಷದ ನಾಯಕ, ಮಾಜಿ ಸಂಸದ ಕಮಲೇಶ್ ಬಾಲ್ಮಿಕಿ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಅವರದೇ ಮನೆಯಲ್ಲಿ ಪತ್ತೆಯಾಗಿದೆ

ಬುಲಂದ್‌ಶಹರ್‌: ಸಮಾಜವಾದಿ ಪಕ್ಷದ ನಾಯಕ, ಮಾಜಿ ಸಂಸದ ಕಮಲೇಶ್ ಬಾಲ್ಮಿಕಿ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಅವರದೇ ಮನೆಯಲ್ಲಿ ಪತ್ತೆಯಾಗಿದೆ.
ಉತ್ತರ ಪ್ರದೇಶದ ಬುಲಂದ್ ಶಹರ್ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾಗಿದ್ದ ಬಾಲ್ಮಿಕಿ ಅವರ ಮೃತದೇಹ ಖರ್ಜಾದಲ್ಲಿರುವ ತಮ್ಮ ನಿವಾಸದಲ್ಲಿ ಸೋಮವಾರ ಪತ್ತೆಯಾಗಿದೆ.
ಪ್ರಾಥಮಿಕ ತನಿಖೆ ವೇಳೆ ವಿಷ ಪ್ರಾಶನದಿಂದ ಸಾವು ಸಂಭವಿಸಿದೆ ಎಂದು ತಿಳಿದುಬಂದಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಒಯ್ಯಲಾಗಿದ್ದು ವರದಿಯ ಬಳಿಕ ಹೆಚ್ಚಿನ ವಿವರ ಬಹಿರಂಗವಾಗಬೇಕುಇದೆ.
ಮೃತದೇಹ ದೊರೆತ ಕೋಣೆ ಒಳಗಡೆಯಿಂದ ಲಾಕ್ ಆಗಿತ್ತು. ಬಾಲ್ಮಿಕಿ ಕುಟುಂಬಸ್ಥರು ಪ್ರಯಾಸದಿಂಡ ಕದ ತೆರೆದಾಗ ಒಳಗೆ ಶವವಾಗಿ ಮಲಗಿದ್ದ ಬಾಲ್ಮಿಕಿ ಕಂಡಿದ್ದಾರೆ ಎಂದು ಪೋಲೀಸರು ವಿವರಿಸಿದರು. 
ಬಾಲ್ಮಿಕಿ 2009ರ ಲೋಕಸಭಾ ಚುನಾವಣೆಯಲ್ಲಿ ಬುಲಂದ್‌ಶಹರ್‌ ಕ್ಷೇತ್ರದಿಂದ ಸಮಾಜವಾದಿ ಪಕ್ಷದಿಂದ ಆಯ್ಕೆಯಾಗಿ ಸಂಸದರಾಗಿದ್ದರು. ಈಗ ಮಾಜಿ ಸಂಸದರ ಸಾವು ಹಲವು ಅನುಮಾನಗಳನ್ನು ಹುಟ್ಟಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel