ಕೋಲ್ಕತಾ: ಮೇ 30 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹೋಗುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ರಾಜಕೀಯ ವೈರತ್ವವನ್ನು ಮರೆತು, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದು, ಅದನ್ನು ದೀದಿ ಒಪ್ಪಿಕೊಂಡಿದ್ದಾರೆ.
ಮೋದಿ ಆಹ್ವಾನದ ಕುರಿತು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮಮತಾ ಬ್ಯಾನರ್ಜಿ ಅವರು, ಅದು ಪ್ರಮಾಣವಚನ ಸ್ವೀಕಾರ ಸಮಾರಂಭವಾಗಿರುವುದರಿಂದ ನಾನು ಭಾಗವಹಿಸಲು ಯತ್ನಿಸುತ್ತೇನೆ ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿರುವ ಎನ್‌ಡಿಎ ಮೈತ್ರಿಕೂಟದ ನರೇಂದ್ರ ಮೋದಿ ಅವರು ಎರಡನೆಯ ಅವಧಿಗೆ ಮೇ 30ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ
ಕಳೆದ ಹಲವು ತಿಂಗಳಿನಿಂದ ಕೇಂದ್ರ ಸರ್ಕಾರದೊಂದಿಗೆ ತೀವ್ರ ಸಂಘರ್ಷ ನಡೆಸಿದ್ದ ಮಮತಾ ಬ್ಯಾನರ್ಜಿ ಅವರು, ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ತೀವ್ರ ಹರಿಹಾಯ್ದಿದ್ದರು. ಆದರೆ, ಚುನಾವಣೆಯಲ್ಲಿ ಅವರು ನಿರೀಕ್ಷಿಸಿರದ ರೀತಿಯಲ್ಲಿ ಸೋಲಿನ ಆಘಾತ ಎದುರಿಸಿದ್ದರು. ಅದರ ಬೆನ್ನಲ್ಲೇ ಟಿಎಂಸಿಯ ನಾಯಕರು, ಕೌನ್ಸಿಲರ್‌ಗಳು ಬಿಜೆಪಿ ಸೇರ್ಪಡೆಯಾಗಿದ್ದರು. ಈ ಎಲ್ಲ ಬೆಳವಣಿಗೆಗಳಿಂದ ಕುದಿಯುತ್ತಿರುವ ಮಮತಾ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎನ್ನಲಾಗಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos