ನವೀನ್ ಪಟ್ನಾಯಕ್ ಪ್ರಮಾಣ ವಚನ ಸ್ವೀಕಾರ 
ದೇಶ

ಸತತ 5ನೇ ಬಾರಿಗೆ ಒಡಿಶಾ ಸಿಎಂ ಆಗಿ ನವೀನ್ ಪಟ್ನಾಯಕ್ ಪ್ರಮಾಣ ವಚನ ಸ್ವೀಕಾರ

ಒಡಿಶಾದ ನೂತನ ಸಿಎಂ ಆಗಿ ನವೀನ್ ಪಟ್ನಾಯಕ್ ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಭುವನೇಶ್ವರ: ಒಡಿಶಾದ ನೂತನ ಸಿಎಂ ಆಗಿ ನವೀನ್ ಪಟ್ನಾಯಕ್ ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.

ಒಡಿಶಾ ರಾಜ್ಯಪಾಲ ಗಣೇಶ್ ಲಾಲ್ ಅವರು ಇಂದು ಬೆಳಗ್ಗೆ ನವೀನ್ ಪಟ್ನಾಯಕ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು, ಕಳೆದ ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ತವರು ಹಿಂಜಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ನವೀನ್ ಪಟ್ನಾಯಕ್ ಅವರು ಭರ್ಜರಿ  ಗೆಲುವು ಸಾಧಿಸಿದ್ದರು. ಅಂತೆಯೇ 147 ವಿಧಾನಸಭಾ ಕ್ಷೇತ್ರಗಳ ಪೈಕಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಪಕ್ಷ 112 ಸ್ಥಾನ ಗಳಿಸಿತ್ತು. ಬಿಜೆಪಿ 23 ಸ್ಥಾನ ಗಳಿಸಿದರೆ, ಕಾಂಗ್ರೆಸ್ 9 ಸ್ಥಾನಗಳಿಸಿತ್ತು. 

ಅಂತೆಯೇ 21 ಸಂಸದೀಯ ಕ್ಷೇತ್ರಗಳ ಪೈಕಿ ಬಿಜೆಡಿ 12 ಸ್ಥಾನ ಗಳಿಸಿತ್ತು.

ನವೀನ್ ಪಟ್ನಾಯಕ್ ಗೆ ಪ್ರಧಾನಿ ಮೋದಿ ಶುಭಾಶಯ
ಇನ್ನು ಇಂದು ಐದನೇ ಬಾರಿಗೆ ಒಡಿಶಾ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನವೀನ್ ಪಟ್ನಾಯಕ್ ಅವರಿಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪ್ರಜೆಗಳ ಆಶೋತ್ತರಗಳನ್ನು ಪೂರ್ಣಗೊಳಿಸಿ ನಿಮಗೆ ಕೇಂದ್ರ ಸರ್ಕಾರದ ಸಂಪೂರ್ಣ ಬೆಂಬಲ ವಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT