ರಾಹುಲ್ ಗಾಂಧಿ 
ದೇಶ

ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತೊರೆಯುವ ಪಟ್ಟು ಸಡಿಲಿಸದ ರಾಹುಲ್ ಗಾಂಧಿ: ವರಿಷ್ಠರ ಸಲಹೆ ತಿರಸ್ಕೃತ

ರಾಹುಲ್ ಗಾಂಧಿ ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಪಟ್ಟನ್ನು ಸಡಿಲಿಸದಿರುವ ...

ನವದೆಹಲಿ: ರಾಹುಲ್ ಗಾಂಧಿ ತಾವು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಪಟ್ಟನ್ನು ಸಡಿಲಿಸದಿರುವ ಹಿನ್ನಲೆಯಲ್ಲಿ ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಮುಂದುವರಿದಿದ್ದು, ಹಿರಿಯ ನಾಯಕರು ಅವರನ್ನು ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಕಾಂಗ್ರೆಸ್ ನ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್, ಉಪ ಮುಖ್ಯಮಂತ್ರಿ ಸಚಿನ್ ಪೈಲಟ್, ಪಕ್ಷದ ಸಂವಹನಾ ವಿಭಾಗದ ಮುಖ್ಯಸ್ಥ ರಂದೀಪ್ ಸಿಂಗ್ ಸುರ್ಜೆವಾಲಾ ಮೊದಲಾದವರು ಮನವೊಲಿಕೆಗೆ ದೆಹಲಿಯತ್ತ ದಾಪುಗಾಲು ಹಾಕುತ್ತಿದ್ದಾರೆ. ಆದರೆ ರಾಹುಲ್ ಕಳೆದ ಸೋಮವಾರ ಗೆಹ್ಲೊಟ್ ಭೇಟಿಯನ್ನು ನಿರಾಕರಿಸಿದ್ದಾರೆ.
ಗೆಹ್ಲೊಟ್ ಅವರು ತಮ್ಮ ಪುತ್ರ ವೈಭವ್ ಗೆ ಈ ಬಾರಿ ಲೋಕಸಭೆಯಲ್ಲಿ ಟಿಕೆಟ್ ಕೊಡಿಸಲು ಹರಸಾಹಸಪಟ್ಟಿದ್ದರು, ನಂತರ ತಮ್ಮ ಪುತ್ರನ ಜೋಧ್ ಪುರ ಕ್ಷೇತ್ರದಲ್ಲಿ ಏಳು ದಿವಸಗಳನ್ನು ಕಳೆದು ಉಳಿದ ಕ್ಷೇತ್ರಗಳನ್ನು ನಿರ್ಲಕ್ಷಿಸಿದ್ದರು, ಇದು ರಾಜ್ಯದಲ್ಲಿ ಕಾಂಗ್ರೆಸ್ ನ ಹೀನಾಯ ಸೋಲಿಗೆ ಕಾರಣ ಎಂಬುದು ರಾಹುಲ್ ಗಾಂಧಿಗೆ ಸಿಟ್ಟು.
ಸದ್ಯ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ರಾಹುಲ್ ಗಾಂಧಿ ಕಳೆದೊಂದು ವಾರದಿಂದ ಕೆಲ ನಾಯಕರನ್ನು ಭೇಟಿ ಮಾಡಿದ್ದಾರೆ. ಸೋಲಿಗೆ ಕಾರಣವಾದ ಅಂಶವನ್ನು ಅಶೋಕ್ ಗೆಹ್ಲೊಟ್, ಸಚಿನ್ ಪೈಲಟ್ ಪ್ರತ್ಯೇಕ ವರದಿಗಳಲ್ಲಿ ನೀಡಿದ್ದಾರೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಕೂಡ ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ನಿವಾಸದಲ್ಲಿದ್ದರು ಎಂದು ಮೂಲಗಳು ಹೇಳುತ್ತವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

'ರಸ್ತೆ ಇರೋದೇ ಡ್ರೈವಿಂಗ್‌ಗೆ ಅಲ್ವಾ?, ಅಪ್ಪ ನೋಡಿಕೊಳ್ಳುತ್ತಾರೆ ಬಿಡಿ'; ದುಬಾರಿ ಮಿನಿ ಕೂಪರ್ ಕಾರು ಹರಿಸಿ ಮೂವರ ಕೊಂದ ಯುವಕನ ಉಡಾಫೆ ಮಾತು! Video

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್