ದೇಶ

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಸೋನಿಯಾ ಗಾಂಧಿ, ರಾಹುಲ್ ಭಾಗಿ

Lingaraj Badiger
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಅವರ ತಾಯಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಗುರುವಾರ ರಾಷ್ಟ್ರಪತಿ ಭವನದಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ಆನಂದ್ ಶರ್ಮಾ ಅವರು ಸಹ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ನರೇಂದ್ರ ಮೋದಿ ಅವರು ನಾಳೆ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಎರಡನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಎನ್ ಡಿಎ ಮಿತ್ರ ಪಕ್ಷಗಳು ನಾಯಕರು, ಹಲವು ಪ್ರತಿಪಕ್ಷಗಳ ನಾಯಕರು ಹಾಗೂ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆ ಇದೆ.
ಬಿಮ್ ಸ್ಟೆಕ್ ರಾಷ್ಟ್ರಗಳಾದ ಬಾಂಗ್ಲಾದೇಶ, ಭಾರತ, ಮ್ಯಾನ್ಮಾರ್, ಶ್ರೀಲಂಕಾ, ಥೈಲ್ಯಾಂಡ್ , ನೇಪಾಳ ಮತ್ತು ಭೂತಾನ್ ನಾಯಕರು ಸಹ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
SCROLL FOR NEXT