ದೇಶ

ಮಹಾತ್ಮಾ ಗಾಂಧಿ, ವಾಜಪೇಯಿ ಸಮಾಧಿಗೆ ಮೋದಿ ಗೌರವ; 2ನೇ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ ಇಂದು

Sumana Upadhyaya

ನವದೆಹಲಿ: ಎರಡನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಗುರುವಾರ ನರೇಂದ್ರ ಮೋದಿಯವರು ಸಾಯಂಕಾಲ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದಕ್ಕೂ ಮುನ್ನ ಇಂದು ಮುಂಜಾನೆ ದೆಹಲಿಯಲ್ಲಿ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿ ಸ್ವಾತಂತ್ರ್ಯ ನಂತರ ಹುತಾತ್ಮರಾದ ಯೋಧರಿಗೆ ನರೇಂದ್ರ ಮೋದಿ ಪುಷ್ಪ ನಮನ ಸಲ್ಲಿಸಿದರು.
ನರೇಂದ್ರ ಮೋದಿಯವರ ಜೊತೆ ನಿರ್ಗಮಿತ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಸುನಿಲ್ ಲಂಬಾ ಮತ್ತು ವಾಯುಪಡೆಯ ಉಪ ಮುಖ್ಯಸ್ಥ ಏರ್ ಮಾರ್ಷಲ್ ಆರ್ ಕೆಎಸ್ ಬದೌರಿಯಾ ಹಾಜರಿದ್ದರು.
ಇದಕ್ಕೂ ಮುನ್ನ ಮೋದಿಯವರು ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಸಮಾಧಿ ಬಳಿ ತೆರಳಿ ಅಗಲಿದ ಹಿರಿಯ ಗಣ್ಯರಿಗೆ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಹಲವು ಬಿಜೆಪಿ ನಾಯಕರು ಹಾಜರಿದ್ದರು.
SCROLL FOR NEXT