ದೇಶ

ಬಿಜೆಪಿಯಂತಹ ಪಕ್ಷವನ್ನು ನಾನು ದ್ವೇಷಿಸುತ್ತೇನೆ: ಮಮತಾ ಬ್ಯಾನರ್ಜಿ

Lingaraj Badiger
ಕೋಲ್ಕತಾ: ಬಿಜೆಪಿ ಕಿರುಕುಳದ ವಿರುದ್ಧ ಧ್ವನಿ ಎತ್ತುವಂತೆ ದೇಶದ ಜನತೆಗೆ ಕರೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಕೇಸರಿ ಪಕ್ಷ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ರಾಜ್ಯದಲ್ಲಿ ಬೆಂಗಾಲಿ ಮತ್ತು ಬೆಂಗಾಲಿಯೇತರರನ್ನು ವಿಭಜಿಸಲು ಯತ್ನಿಸುತ್ತಿದ್ದು, ಈ ಮೂಲಕ ಕೋಮುಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಬಿಜೆಪಿಯಂತಹ ಪಕ್ಷವನ್ನು ನಾನು ದ್ವೇಷಿಸುತ್ತೇನೆ ಎಂದು ದೀದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ತೀವ್ರ ಹಿನ್ನಡೆ ಅನುಭವಿಸಿದ ನಂತರ ಮೊದಲ ಬಾರಿ ರಾಜಕೀಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ದೇಶದ ಜನ ಕೋಮು ಗಲಭೆಯ ವಿರುದ್ಧ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು.
ಚುನಾವಣೆ ಫಲಿತಾಂಶದ ಬಳಿಕ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಟಿಎಂಸಿ ಆಯೋಜಿಸಿದ್ದ ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ದೀದಿ, ಬಿಜೆಪಿ ಗೂಂಡಾಗಳು 400ಕ್ಕೂ ಹೆಚ್ಚು ಬೆಂಗಾಲಿಗಳ ಕುಟುಂಬವನ್ನು ನಿರಾಶ್ರಿತರನ್ನಾಗಿ ಮಾಡಿದ್ದಾರೆ. ಬಿಜೆಪಿ ಗೂಂಡಾಗಳಿಗೆ ತಾವು ಹೆದರುವುದಿಲ್ಲ ಎಂದರು.
SCROLL FOR NEXT