ತೇಜ್ ಪ್ರತಾಪ್ ಯಾದವ್ 
ದೇಶ

ಪಾಟ್ನಾ: ಕಾರು ಅಪಘಾತದಲ್ಲಿ ಲಾಲು ಪುತ್ರ ತೇಜ್ ಪ್ರತಾಪ್ ಗೆ ಗಾಯ

ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಅಪಘಾತಕ್ಕಿಡಾಗಿದ್ದು, ಘಟನೆಯಲ್ಲಿ...

ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜ್ ಪ್ರತಾಪ್ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಅಪಘಾತಕ್ಕಿಡಾಗಿದ್ದು, ಘಟನೆಯಲ್ಲಿ ಲಾಲು ಪುತ್ರ ಹಾಗೂ ಅವರ ಬೆಂಬಲಿಗರೊಬ್ಬರು ಗಾಯಗೊಂಡಿದ್ದಾರೆ.
ಪಾಟ್ನಾದ ತಮ್ಮ ನಿವಾಸದಿಂದ ಪಕ್ಷದ ಕಚೇರಿಗೆ ತೆರಳುತ್ತಿದ್ದ ವೇಳೆ ಇಕೋ ಪಾರ್ಕ್ ತೇಜ್ ಪ್ರತಾಪ್ ಕಾರು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ತೇಜ್ ಪ್ರತಾಪ್ ಅವರು ಮಾರುತಿ ಬ್ರೀಜ್ ಕಾರಿನಲ್ಲಿ ಇಬ್ಬರು ಸಹಾಯಕರೊಂದಿಗೆ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ.
ಅಪಘಾತದಲ್ಲಿ ಎರಡು ವಾಹನಗಳು ನುಜ್ಜು ನುಜ್ಜಾಗಿವೆ. ತೇಜ್ ಪ್ರತಾಪ್ ಅವರ ಕಾಲಿಗೆ ಗಾಯಗಳಾಗಿದ್ದು, ಜೊತೆಗೆ ಅವರ ಬೆಂಬಲಿಗನ ತಲೆಗೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ತೇಜ್ ಪ್ರತಾಪ್ ಮತ್ತು ಇತರೆ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel