ಸಾಂದರ್ಭಿಕ ಚಿತ್ರ 
ದೇಶ

ದೇಶದ ಎಲ್ಲಾ ರೈತರಿಗೂ ಪಿಎಂ ಕಿಸಾನ್ ಯೋಜನೆ ವಿಸ್ತರಣೆ, ಚಿಲ್ಲರೆ ವ್ಯಾಪಾರಿಗಳಿಗೆ ಪಿಂಚಣಿ

ಸತತ ಎರಡನೇ ಅವಧಿಗೆ ಪ್ರಧಾನಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು ತಮ್ಮ ಮೊದಲ ಸಂಪುಟ ಸಭೆಯಲ್ಲಿ...

ನವದೆಹಲಿ: ಸತತ ಎರಡನೇ ಅವಧಿಗೆ ಪ್ರಧಾನಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರು ತಮ್ಮ ಮೊದಲ ಸಂಪುಟ ಸಭೆಯಲ್ಲಿ ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಭರ್ಜರಿ ಕೊಡುಗೆ ನೀಡಿದ್ದಾರೆ.
ಈ ಹಿಂದೆ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ವಾರ್ಷಿಕ 6,000 ರೂ. ಸಹಾಯಧನ ನೀಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಇದೀಗ ಎಲ್ಲಾ ರೈತರಿಗೂ ವಿಸ್ತರಣೆ ಮಾಡಲು ಮೋದಿ ನೇತೃತ್ವದ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ.
ಇದರಿಂದ ದೇಶದ ಸುಮಾರು 15 ಕೋಟಿ ರೈತರಿಗೆ ಅನುಕೂಲವಾಗಲಿದ್ದು, ಒಟ್ಟು ಮೂರು ಕಂತುಗಳಲ್ಲಿ ವಾರ್ಷಿಕ 6,000 ರೂ ಸಹಾಯಧನ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇನ್ನು ಕೇಂದ್ರದ ಈ ನಿರ್ಧಾರದಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 87,217.50 ಕೋಟಿ ರೂ. ಹೊರೆ ಬೀಳಲಿದ್ದು, ರೈತರ ಆರ್ಥಿಕ ಸ್ಥಿತಿ ಸುಧಾರಿಸುವ ತನ್ನ ವಾಗ್ದಾನಕ್ಕೆ ಬದ್ಧ ಎಂಬ ಸಂದೇಶವನ್ನು ಮೋದಿ ಸರ್ಕಾರ ರವಾನಿಸಿದೆ.
ಇದೇ ವೇಳೆ ಪಿಎಂ-ಕಿಸಾನ್‌ ಪೆನ್ಷನ್‌ ಯೋಜನೆ(ಎಸ್‌ಎಂಎಫ್‌)ಗೂ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಯೋಜನೆ ಸಂಪೂರ್ಣ ಐಚ್ಛಿಕವಾಗಿದ್ದು, ದೇಶದ ಎಲ್ಲ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪಿಂಚಣಿ ನೀಡುವ ಯೋಜನೆ ಇದಾಗಿದೆ. 
ಇನ್ನು ವ್ಯಾಪಾರಸ್ಥರಿಗೂ ಪಿಂಚಣಿ ಯೋಜನೆ ಘೋಷಿಸಿರುವ ಮೋದಿ ಸರ್ಕಾರ, ದೇಶದ ಸುಮಾರು 3 ಕೋಟಿ ಚಿಲ್ಲರೆ ವ್ಯಾಪಾರಿಗಳಿಗೆ ಭರ್ಜರಿ ಕೊಡುಗೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ, ‘ಒಗ್ಗಟ್ಟೇ ನಮ್ಮ ಶಕ್ತಿ’ ಎಂದ ಮಲ್ಲಿಕಾರ್ಜುನ ಖರ್ಗೆ..!

ಬಿಜೆಪಿ, ದೇವೇಗೌಡರಿಗೆ ರಾಜ್ಯಸಭಾ ಸ್ಥಾನ ನಿರಾಕರಿಸಿದ ರೀತಿ ಕನ್ನಡಿಗರಿಗೆ ಮಾಡಿದ ಅವಮಾನ: ಕಾಂಗ್ರೆಸ್

INDIA Bloc Meeting Underway: ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ಚುನಾವಣಾ ಆಯೋಗ ನೆರವು- ಮಮತಾ ಬ್ಯಾನರ್ಜಿ ಆರೋಪ!

ಮುಂಬೈ: ಪೀಕ್ ಟ್ರಾಫಿಕ್ ಸಮಯದಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದ BEST Bus: ಓರ್ವ ಸಾವು!| video

ಸಿದ್ದರಾಮಯ್ಯ ನಂತರ ಎರಡನೇ ಹಂತದ ಕುರುಬ ನಾಯಕರು ಯಾರು: ಸಮುದಾಯಕ್ಕೆ ಬೇಕಿಲ್ಲ ಬೈರತಿ ಸುರೇಶ್- ಯತೀಂದ್ರರಂತ 'ರತ್ನಗಂಬಳಿ' ಲೀಡರ್ಸ್?

SCROLL FOR NEXT