ದೇಶ

ಜಾರ್ಖಂಡ್ ವಿಧಾನಸಭೆ ಚುನಾವಣೆ: ನ.30ರಿಂದ 5 ಹಂತದಲ್ಲಿ ಮತದಾನ, ಡಿ.23ರಂದು ಫಲಿತಾಂಶ

Srinivasamurthy VN

ರಾಂಚಿ: ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.

ಜಾರ್ಖಂಡ್ ವಿಧಾನಸಭೆಗೆ ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕ ನಿಗದಿ ಮಾಡಿದೆ. ಈ ಕುರಿತು ಇಂದು ದೆಹಲಿಯ ಚುನಾವಣಾ ಆಯೋಗದ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನಿಲ್ ಅರೋರಾ ಅವರು, ಜಾರ್ಖಂಡ್ ನ ಒಟ್ಟು 81 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು ಐದು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಹೇಳಿದ್ದಾರೆ. ನವೆಂಬರ್ 30 ರಿಂದ ಡಿಸೆಂಬರ್ 20ರವರೆಗೂ ಈ ಐದು ಹಂತಗಳ ಮತದಾನ ನಡೆಯಲಿದೆ. ಡಿಸೆಂಬರ್ 23ರಂದು ಮತಣಿಕೆ ಕಾರ್ಯ ಮತ್ತು ಫಲಿತಾಂಶ ಪ್ರಕಟವಾಗಲಿದೆ ಎಂದು ಹೇಳಿದರು.

ಜಾರ್ಖಂಡ್‌ನ 19 ಜಿಲ್ಲೆಗಳು ನಕ್ಸಲ ಪೀಡಿತ ಪ್ರದೇಶಗಳಾಗಿರುವುದರಿಂದ 5 ಹಂತಗಳಲ್ಲಿ ಮತದಾನ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ನವೆಂಬರ್ 30 ರಂದು ಮೊದಲ ಹಂತಕ್ಕೆ ಮತ ಚಲಾಯಿಸಲಾಗುವುದು. ಮೊದಲ ಹಂತದಲ್ಲಿ 13 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಡಿಸೆಂಬರ್ 7 ರಂದು ಎರಡನೇ ಹಂತ, ಡಿಸೆಂಬರ್ 12 ರಂದು ಮೂರನೇ ಹಂತ, ಡಿಸೆಂಬರ್ 16 ರಂದು ನಾಲ್ಕನೇ ಹಂತ ಮತ್ತು ಡಿಸೆಂಬರ್ 20 ರಂದು ಐದನೇ ಹಂತದ ಮತದಾನ ನಡೆಯಲಿದೆ ಎಂದು ತಿಳಿಸಿದರು.

SCROLL FOR NEXT