ದೇಶ

ನವೆಂಬರ್ 7 ರೊಳಗೆ ಸರ್ಕಾರ ರಚನೆಯಾಗದಿದ್ದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿ: ಬಿಜೆಪಿ ನಾಯಕ

Srinivasamurthy VN

ಮುಂಬೈ: ನವೆಂಬರ್ 7 ರೊಳಗೆ ಸರ್ಕಾರ ರಚನೆಯಾಗದಿದ್ದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ.

ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಜಯಭೇರಿ ಭಾರಿಸಿದ್ದರೂ, ಅಲ್ಲಿ ಇನ್ನೂ ಸರ್ಕಾರ ರಚನೆ ಸಾಧ್ಯವಾಗಿಲ್ಲ. ಮೈತ್ರಿ ಪಕ್ಷಗಳಲ್ಲಿನ ಆಂತರಿಕ ಕಿತ್ತಾಟ ಮತ್ತು ಸಿಎಂ ಗಾದಿ ಮೇಲಿನ ಜಿಜ್ಞಾಸೆಯಿಂದಾಗಿ ಸರ್ಕಾರ ರಚನೆ ಸಾಧ್ಯವಾಗಿಲ್ಲ. ಮುಖ್ಯಮಂತ್ರಿ ಪಟ್ಟಕ್ಕಾಗಿ ಪಟ್ಟು ಹಿಡಿದಿರುವ ಶಿವಸೇನೆ ಇನ್ನೂ ತನ್ನ ಪಟ್ಟು ಸಡಿಸಿಲಿಸಿಲ್ಲ. ಅಂತೆಯೇ ಬಿಜೆಪಿ ಸಿಎಂ ಸ್ಥಾನ ಶಿವಸೇನೆ ಬಿಟ್ಟುಕೊಡಲು ಸಿದ್ಧವಾಗಿಲ್ಲ.

ಇವುಗಳ ನಡುವೆಯೇ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಭೀತಿ ಎದುರಾಗಿದ್ದು, ಇದೇ ನವೆಂಬರ್ 7 ರೊಳಗೆ ಸರ್ಕಾರ ರಚನೆಯಾಗದಿದ್ದರೆ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಬಗ್ಗೆ ಬಿಜೆಪಿ ಸಚಿವ ಸುಧೀರ್ ಮುಂಗಂತಿವಾರ್ ಅವರು ಹೇಳಿಕೆ ನೀಡಿದ್ದು, ಚುನಾವಣಾ ಫಲಿತಾಂಶ ಪ್ರಕಟವಾಗಿ 8 ದಿನಗಳು ಕಳೆದಿದ್ದು, ಇನ್ನೂ ಸರ್ಕಾರ ರಚನೆಯಾಗಿಲ್ಲ. ಇನ್ನು ಉಳಿದ 7 ದಿನಗಳೊಳಗೆ ಅಂದರೆ ನವೆಂಬರ್ 7ರೊಳಗೆ ಇಲ್ಲಿ ಸರ್ಕಾರ ರಚನೆಯಾಗದಿದ್ದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಳೆದ ಅಕ್ಟೋಬರ್ 21ರಂದು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿತ್ತು. 

SCROLL FOR NEXT