ದೇಶ

ದೆಹಲಿ ಸುತ್ತಮುತ್ತ ತುರ್ತು ಆರೋಗ್ಯ ಮುನ್ನೆಚ್ಚರಿಕೆ ಘೋಷಿಸಿದ ಸುಪ್ರೀಂ ಕೋರ್ಟ್ 

Sumana Upadhyaya

ನವದೆಹಲಿ: ದೆಹಲಿ-ಎನ್ ಸಿಆರ್ ಪ್ರದೇಶಗಳಲ್ಲಿ ಸಾರ್ವಜನಿಕ ತುರ್ತು ಆರೋಗ್ಯ ಘೋಷಿಸಿರುವ ಸುಪ್ರೀಂ ಕೋರ್ಟ್ ಇದೇ 5ರವರೆಗೆ ಎಲ್ಲಾ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ನಿಷೇಧ ಹೇರಿದೆ.


ರಾಜಧಾನಿಯಲ್ಲಿ ವಾಯುಮಾಲಿನ್ಯ ಮಟ್ಟ ಗಂಭೀರ ಮಟ್ಟ ದಾಟಿರುವುದರಿಂದ ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ ಚಳಿಗಾಲದಲ್ಲಿ ಪಟಾಕಿಗಳನ್ನು ಸಿಡಿಸುವುದಕ್ಕೆ ನಿಷೇಧ ಹೇರಿದೆ.


ಈ ಕುರಿತು ದೆಹಲಿ, ಹರ್ಯಾಣ, ರಾಜಸ್ತಾನ, ಉತ್ತರ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಪ್ರಾಧಿಕಾರ ಅಧ್ಯಕ್ಷ ಭುರೆ ಲಾಲ್, ದೆಹಲಿ ಮತ್ತು ಎನ್ ಸಿಆರ್ ಪ್ರದೇಶಗಳಲ್ಲಿ ವಾಯುಮಾಲಿನ್ಯ ಮಟ್ಟ ತೀರಾ ಹದಗೆಟ್ಟಿದ್ದು ಈಗ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಅದರಲ್ಲೂ ಮುಖ್ಯವಾಗಿ ಮಕ್ಕಳ ಹಿತದೃಷ್ಟಿಯಿಂದ ಈ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

SCROLL FOR NEXT