ದೇಶ

ರಾಜ್ಯಪಾಲ, ರಾಷ್ಟ್ರಪತಿಗಳ ಕಚೇರಿ ದುರ್ಬಳಕೆ ಪ್ರಜಾಪ್ರಭುತ್ವಕ್ಕೆ ಮಾರಕ: ಶಿವಸೇನೆಯ ಸಂಜಯ್ ರಾವುತ್ 

Srinivas Rao BV

ಮುಂಬೈ: ನ.07 ರ ವೇಳೆಗೆ ಮಹಾರಾಷ್ಟ್ರ ಸರ್ಕಾರ ರಚನೆ ಕಗ್ಗಂಟಾಗಿಯೇ ಉಳಿದರೆ ರಾಷ್ಟ್ರಪತಿ ಆಡಳಿತ ಎದುರಿಸಬೇಕಾಗುತ್ತದೆ ಎಂಬ ಬಿಜೆಪಿ ನಾಯಕ ಸುಧೀರ್ ಮುಂಗಂಟಿವಾರ್ ಹೇಳಿಕೆಗೆ ಶಿವಸೇನೆ ನಾಯಕ ಸಂಜಯ್ ರಾವುತ್ ತಿರುಗೇಟು ನೀಡಿದ್ದಾರೆ. 

ಬಿಜೆಪಿ ನಾಯಕರ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿರುವ ಸಂಜಯ್ ರಾವುತ್, ರಾಷ್ಟ್ರಪತಿಗಳು ನಿಮ್ಮ ಜೇಬಿನಲ್ಲಿದ್ದಾರೆಯೇ? ಮಹಾರಾಷ್ಟ್ರದ ಬಿಜೆಪಿ ಕಚೇರಿಯಲ್ಲಿ ರಾಷ್ಟ್ರಪತಿಗಳ ಸೀಲ್ ಇದೆಯೇ ಎಂದು ಪ್ರಶ್ನಿಸಿದ್ದಾರೆ. 

ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದ್ದ ಶಿವಸೇನೆ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಮುಖ್ಯಮಂತ್ರಿಗಳ ಸ್ಥಾನವೂ ಸೇರಿದಂತೆ ಎಲ್ಲಾ ಅಧಿಕಾರವೂ 50:50 ಅನುಪಾತದಲ್ಲಿ ಹಂಚಿಕೆಯಾಗಬೇಕು ಎಂದು ಬಿಗಿಪಟ್ಟು ಹಿಡಿದಿದೆ. 

ನ.08 ರಂದು ಮಹಾರಾಷ್ಟ್ರದ ಹಾಲಿ ವಿಧಾನಸಭೆ ಅವಧಿ ಅಂತ್ಯವಾಗಲಿದ್ದು ಇದಕ್ಕೂ ಮುನ್ನ ಹೊಸ ಸರ್ಕಾರ ರಚನೆಯಾಗಬೇಕಿದೆ. ಆದರೆ ಅಧಿಕಾರದ ಹಂಚಿಕೆ ವಿಚಾರವಾಗಿ ಬಿಜೆಪಿ-ಶಿವಸೇನೆ ನಡುವೆ ಗೊಂದಲ ಮುಂದುವರೆದಿರುವ ಹಿನ್ನೆಲೆಯಲ್ಲಿ ಬಿಕ್ಕಟ್ಟು ಉಂಟಾಗಿದೆ. 

SCROLL FOR NEXT