ದೆಹಲಿ ಏರ್ಪೋರ್ಟ್ ನಲ್ಲಿ ಪತ್ತೆಯಾದ ಬ್ಯಾಗ್ ನಲ್ಲಿ ಆರ್ ಡಿಎಕ್ಸ್ ಇರಲಿಲ್ಲ: ಬ್ಯಾಗ್ ಮಾಲಿಕನಿಗೆ ಕ್ಲೀನ್ ಚಿಟ್ ಇಲ್ಲ! 
ದೇಶ

ದೆಹಲಿ ಏರ್ಪೋರ್ಟ್ ನಲ್ಲಿ ಪತ್ತೆಯಾದ ಬ್ಯಾಗ್ ನಲ್ಲಿ ಆರ್ ಡಿಎಕ್ಸ್ ಇರಲಿಲ್ಲ: ಬ್ಯಾಗ್ ಮಾಲಿಕನಿಗೆ ಕ್ಲೀನ್ ಚಿಟ್ ಇಲ್ಲ! 

ದೆಹಲಿ ವಿಮಾನನಿಲ್ದಾಣದಲ್ಲಿ ಕೆಲ ಕಾಲ ಆತಂಕಕ್ಕೆ ಕಾರಣವಾಗಿದ್ದ ಬ್ಯಾಗ್ ನಲ್ಲಿ ಆರ್ ಡಿಎಕ್ಸ್ ಪತ್ತೆಯಾಗಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. 

ನವದೆಹಲಿ: ದೆಹಲಿ ವಿಮಾನನಿಲ್ದಾಣದಲ್ಲಿ ಕೆಲ ಕಾಲ ಆತಂಕಕ್ಕೆ ಕಾರಣವಾಗಿದ್ದ ಬ್ಯಾಗ್ ನಲ್ಲಿ ಆರ್ ಡಿಎಕ್ಸ್ ಪತ್ತೆಯಾಗಿಲ್ಲ ಎಂದು ದೆಹಲಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ. 

ಉಪೇಕ್ಷಿತ ಬ್ಯಾಗ್ ನ್ನು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ತಪಾಸಣೆ ನಡೆಸಿದ್ದು, ಅದರಲ್ಲಿ ಆರ್ ಡಿಎಕ್ಸ್ ಇರುವುದು ಪತ್ತೆಯಾಗಿಲ್ಲ. ಬದಲಾಗಿ ಅದರಲ್ಲಿ ಆಟಿಕೆಗಳು, ಚಾರ್ಜರ್ ಗಳು, ಚಾಕೊಲೇಟ್ ಗಳು, ಡ್ರೈ ಫ್ರೂಟ್ಸ್ಗಳಿದ್ದವು. 

ಬ್ಯಾಗ್ ನ ಶಹೀದ್ ಖಾನ್ ಮಾಲಿಕ ಪತ್ತೆಯಾಗಿದ್ದು, ಹರ್ಯಾಣದ ನಿವಾಸಿ ಎಂದು ತಿಳಿದುಬಂದಿದೆ. ಮುಂಬೈ ನಿಂದ ದೆಹಲಿಗೆ ಸ್ನೇಹಿತರೊಂದಿಗೆ ಆಗಮಿಸಿದ್ದಾಗ ಮರೆತು ಈ ಬ್ಯಾಗ್ ನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದರು. ಈಗ ಬ್ಯಾಗ್ ಮಾಲಿಕರನ್ನು ಪತ್ತೆಯಹಚ್ಚಿರುವ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!