ಬಾಬರಿ ಮಸೀದಿ ತೀರ್ಪು ಹಿನ್ನೆಲೆ ಸಾಮಾಜಿಕ ತಾಣಗಳ ಮೇಲೆ ನಿರ್ಬಂಧ
ರಾಮಜನ್ಮಭೂಮಿ-ಬಾಬ್ರಿ ಮಸೀದಿ ಮೂಲ ನಿವೇಶನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಸದ್ಯವೇ ಬರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಉತ್ತರಪ್ರದೇಶ ಸರ್ಕಾರ ಮುಂದಾಗಿದೆ .
ಲಖನೌ: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಮೂಲ ನಿವೇಶನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಸದ್ಯವೇ ಬರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಉತ್ತರಪ್ರದೇಶ ಸರ್ಕಾರ ಮುಂದಾಗಿದೆ .
ಜನರು ವಾಟ್ಸಪ್, ಟ್ವೀಟರ್, ಟೆಲಿಗ್ರಾಮ್ ಹಾಗೂ ಇನ್ಸ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ತೆರನಾದ ಮಾನಹಾನಿಯಾಗುವಂತಹ, ಧಕ್ಕೆ ತರುವಂತಹ ವಿಷಯಗಳನ್ನು ಹಂಚಿಕೊಳ್ಳದಂತೆ ನಿರ್ಬಂಧ ವಿಧಿಸಿ ಉತ್ತರಪ್ರದೇಶ ಸರ್ಕಾರ ನಾಲ್ಕುಪುಟಗಳ ನಿರ್ದೇಶನ ನೀಡಿದೆ ಎಂದೂ ವರದಿಯಾಗಿದೆ.
ಸುಮಾರು ಎರಡು ತಿಂಗಳ ಕಾಲ ಈ ನಿರ್ಬಂಧ ಅಯೋಧ್ಯೆಯಲ್ಲಿ ಮುಂದುವರಿಯಲಿದ್ದು, ಈ ಸಮಯದಲ್ಲಿ ವಿದ್ಯುನ್ಮಾನ ಮಾಧ್ಯಮಗಳಲ್ಲಿ ನಡೆಯಲಿರುವ ಯಾವುದೇ ಚರ್ಚೆಯನ್ನು ನಡೆಸದಂತೆ ನಿರ್ಬಂಧ ಹೇರಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.