ಸಂಗ್ರಹ ಚಿತ್ರ 
ದೇಶ

3 ವರ್ಷಗಳಲ್ಲೇ ದೆಹಲಿಯಲ್ಲಿ ವಾಯುಮಾಲಿನ್ಯ ಗರಿಷ್ಠ ಮಟ್ಟಕ್ಕೆ, ಮತ್ತೆ ಸಮ-ಬೆಸ ಸಂಖ್ಯೆ ಯೋಜನೆ ಜಾರಿ!

ದೆಹಲಿ-ಎನ್‌ಸಿಆರ್‌ ಯಲ್ಲಿ ವಾಯುಮಾಲಿನ್ಯ ಅಪಾಯದ ಮಟ್ಟದಿಂದ ಮಾರಕ ಮಟ್ಟವನ್ನು ತಲುಪಿದ್ದು, ಇಂದಿನಿಂದಲೇ ದೆಹಲಿ ಸರ್ಕಾರ ಸಮ-ಬೆಸ ಸಂಖ್ಯೆ ಯೋಜನೆಯನ್ನು ಮತ್ತೆ ಜಾರಿಗೆ ತಂದಿದೆ.

ನವದೆಹಲಿ: ದೆಹಲಿ-ಎನ್‌ಸಿಆರ್‌ ಯಲ್ಲಿ ವಾಯುಮಾಲಿನ್ಯ ಅಪಾಯದ ಮಟ್ಟದಿಂದ ಮಾರಕ ಮಟ್ಟವನ್ನು ತಲುಪಿದ್ದು, ಇಂದಿನಿಂದಲೇ ದೆಹಲಿ ಸರ್ಕಾರ ಸಮ-ಬೆಸ ಸಂಖ್ಯೆ ಯೋಜನೆಯನ್ನು ಮತ್ತೆ ಜಾರಿಗೆ ತಂದಿದೆ.

ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ ಭಾನುವಾರ ಮಳೆ ಸುರಿದ ನಂತರ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟಿದ್ದು, ದಟ್ಟ ಹೊಗೆ ಮತ್ತು ಕಡಿಮೆ ಗೋಚರತೆಯಿಂದಾಗಿ ಸಂಚಾರ ಅಸ್ಥವ್ಯಸ್ಥಗೊಂಡಿದೆ. ಇನ್ನು ಖಾಸಗಿ ಹವಾಮಾನ ವೆಬ್ ಸೈಟ್ aqicn.org  ನೀಡಿರುವ ವರದಿ ಅನ್ವಯ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕ 999ಕ್ಕೆ ತಲುಪಿದ್ದು, ಇದು ಕಳೆದ ಮೂರು ವರ್ಷಗಳಲ್ಲಿ ಅತ್ಯಂತ ಗರಿಷ್ಠ ಮಟ್ಟದ್ದು ಎಂದು ಹೇಳಲಾಗಿದೆ. ಇನ್ನು ದೆಹಲಿಯ ಪೂಸಾದಲ್ಲಿ AQI 994, ಸತ್ಯವತಿ ಕಾಲೇಜಿನಲ್ಲಿ AQI  999, ಐಟಿಐ ಜಹಾಂಗೀರ್‌ಪುರಿಯಲ್ಲಿ AQI 999 ಮತ್ತು ಸೋನಿಯಾ ವಿಹಾರ್ ವಾಟರ್ ಟ್ರೀಟ್‌ಮೆಂಟ್ ಪ್ಲಾಂಟ್‌ನಲ್ಲಿ AQI 999 ಇತ್ತು ಎನ್ನಲಾಗಿದೆ.

ವಿಮಾನಗಳ ಸಂಚಾರದಲ್ಲೂ ತೀವ್ರ ಅಸ್ಥವ್ಯಸ್ಥ
ಭಾನುವಾರ ಬೆಳಿಗ್ಗೆ ದೆಹಲಿಯಲ್ಲಿ ಮಳೆಯಿಂದಾಗಿ ಮಾಲಿನ್ಯ ಕಡಿಮೆಯಾಗುತ್ತದೆ ಎಂಬ ನಿರೀಕ್ಷೆಯಿತ್ತು. ಆದರೆ ತಜ್ಞರ ಊಹೆಗಳು ತಲೆಕೆಳಗಾಗಿದ್ದು, ಮಾಲಿನ್ಯ ಮಟ್ಟ ಇನ್ನೂ ಹೆಚ್ಚಾಗಿದೆ. ಪರಿಣಾಮ ದೆಹಲಿಯಲ್ಲಿ ವಿಮಾನ ಸಂಚಾರ ಕೂಡ ಅಸ್ತವ್ಯಸ್ಥಗೊಂಡಿದೆ. ಮೂಲಗಳ ಪ್ರಕಾರ 32 ವಿಮಾನಗಳ ಮಾರ್ಗ ಬದಲಿಸಲಾಗಿದೆ.

ದೆಹಲಿಯ ಎಲ್ಲಾ ಶಾಲೆಗಳನ್ನು ನವೆಂಬರ್ 5 ರೊಳಗೆ ಮುಚ್ಚುವಂತೆ ದೆಹಲಿ ಸರ್ಕಾರ ಶುಕ್ರವಾರ ಆದೇಶಿಸಿದೆ. ಇದಲ್ಲದೆ, ದೆಹಲಿ ಸರ್ಕಾರವು ನವೆಂಬರ್ 4 ರಿಂದ ನವೆಂಬರ್ 15 ರವರೆಗೆ ರಾಷ್ಟ್ರ ರಾಜಧಾನಿಯಲ್ಲಿ ವಾಹನಗಳ ಆಡ್-ಈವ್ ಯೋಜನೆಯನ್ನು ಜಾರಿಗೆ ತರಲು ಶುಕ್ರವಾರ ಅಧಿಸೂಚನೆ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT