ದೇಶ

ಶಿವಸೇನೆಗೆ 'ನೋ' ಅಂದರಾ ಸೋನಿಯಾ ಗಾಂಧಿ?, ಬಿಜೆಪಿ ಬಾಯಿಗೆ ಲಡ್ಡು!

Vishwanath S

ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿಯೇತ್ತರ ಸರ್ಕಾರ ರಚನೆಗೆ ಶಿವಸೇನೆ ಯತ್ನಿಸಿತ್ತು. ಆದರೆ ಇದೀಗ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಶಿವಸೇನೆಗೆ ಬೆಂಬಲ ನೀಡುವುದಕ್ಕೆ ನೋ ಅಂದಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋನಿಯಾ ಗಾಂಧಿ ಜೊತೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶರದ್ ಪವಾರ್ ಅವರು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಜವಾಬ್ದಾರಿ ಬಿಜೆಪಿ ಮತ್ತು ಅದರ ಮಿತ್ರಪಕ್ಷ ಶಿವಸೇನೆ ಮೇಲಿದೆ. ಆದರೆ ಭವಿಷ್ಯದಲ್ಲಿ ಏನಾಗಲಿದೆ ಎಂಬುದನ್ನು ಹೇಳಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಶಿವಸೇನೆಯನ್ನು ಅಡ್ಡಕತ್ತರಿಯಲ್ಲಿ ಸಿಲುಕಿಸಿದ್ದಾರೆ. 

ಸೋನಿಯಾ ಗಾಂಧಿ ಅವರ ಜೊತೆ ಸರ್ಕಾರ ರಚನೆ ಬಗ್ಗೆ ನಾವು ಚರ್ಚಿಸಿಲ್ಲ. ಸ್ಥಾನಗಳ ಸಂಖ್ಯಾಬಲವನ್ನು ಕಾಂಗ್ರೆಸ್ ಮುಖ್ಯಸ್ಥರಿಗೆ ವಿವರಿಸಿದ್ದೇನೆ. ಎನ್ಸಿಪಿ, ಕಾಂಗ್ರೆಸ್ ಇತರೆ ಸ್ವತಂತ್ರ ಅಭ್ಯರ್ಥಿಗಳು ನಮಗೆ ಸಹಾಯ ಮಾಡಲು ಸಿದ್ಧರಿದ್ದಾರೆ. ಆದರೆ ಸರ್ಕಾರ ರಚಿಸುವಷ್ಟು ಸಂಖ್ಯಾಬಲ ನಮ್ಮ ಬಳಿ ಇಲ್ಲ ಎಂದರು.

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ 11 ದಿನ ಕಳೆದಿದ್ದು ಬಿಜೆಪಿ ಮತ್ತು ಶಿವಸೇನೆ ನಡುವಿನ ತಿಕ್ಕಾಟದಿಂದಾಗಿ ಸರ್ಕಾರ ರಚನೆ ಸಾಧ್ಯವಾಗಿಲ್ಲ. ಮೈತ್ರಿಯೊಂದಿಗೆ ಚುನಾವಣೆ ಎದುರಿಸಿದ ಬಳಿಕ ಬಿಜೆಪಿಗೆ ಹೆಚ್ಚು ಸ್ಥಾನಗಳು ಸಿಗದಿದ್ದರಿಂದ ಶಿವಸೇನೆ ಸರ್ಕಾರದಲ್ಲಿ 50:50 ಅನುಪಾತದಲ್ಲಿ ಅಧಿಕಾರ ಹಂಚಿಕೆ ಮಾಡುವಂತೆ ಒತ್ತಾಯಿಸುತ್ತಿದ್ದು ಇದಕ್ಕೆ ಬಿಜೆಪಿ ಒಪ್ಪಿಕೊಳ್ಳುತ್ತಿಲ್ಲ.

SCROLL FOR NEXT