ದೇಶ

ಕೇರಳದಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್, ಶಿಕ್ಷಕರಿಗೆ ಸಾಮಾಜಿಕ ಮಾಧ್ಯಮ ನಿಷೇಧ

Lingaraj Badiger

ತಿರುವನಂತಪುರಂ: ಶಾಲೆಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸಲು ಕೇರಳ ಸರ್ಕಾರ ನಿರ್ಧರಿಸಿದೆ. ಮೊದಲು, ಶಿಕ್ಷಕರು ಶಾಲೆಯಲ್ಲಿರುವಾಗ ಸಾಮಾಜಿಕ ಮಾಧ್ಯಮ ಬಳಸದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.

ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಶಾಲೆಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸದಂತೆ ಮತ್ತು ಶಿಕ್ಷಕರು ಸಾಮಾಜಿಕ ಮಾಧ್ಯಮ ಬಳಸದಂತೆ ನಿರ್ಬಂಧ ವಿಧಿಸಿದೆ.

ಈಗಾಗಲೇ ಶಾಲೆಯಲ್ಲಿ ಮೊಬೈಲ್ ಬಳಸದಂತೆ ನಿಷೇಧಿಸಲಾಗಿದೆ. ಆದರೆ ಅದನ್ನು ಸರಿಯಾಗಿ ಜಾರಿಗೆ ತರದ ಹಿನ್ನೆಲೆಯಲ್ಲಿ, ಸಾರ್ವಜನಿಕ ಶಿಕ್ಷಣ ಇಲಾಖೆ ಈಗ ಹೊಸ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದೆ.

ಇದೇ ಮೊದಲ ಬಾರಿಗೆ ಶಿಕ್ಷಕರು ಶಾಲೆಯಲ್ಲಿರುವಾಗ ಫೇಸ್ ಬುಕ್, ವಾಟ್ಸ್ ಆಪ್, ಟ್ವೀಟರ್ ನಂತಹ ಸಾಮಾಜಿಕ ಮಾಧ್ಯಮಗಳನ್ನು ಬಳಸದಂತೆ ನಿಷೇಧ ಹೇರಲಾಗಿದೆ.

SCROLL FOR NEXT