ದೇಶ

ಎಲ್ ಜೆಪಿ ಅಧ್ಯಕ್ಷರಾಗಿ ರಾಮ್ ವಿಲಾಸ್ ಪಾಸ್ವಾನ್ ಪುತ್ರ ಚಿರಾಗ್ ಆಯ್ಕೆ

Lingaraj Badiger

ನವದೆಹಲಿ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಅವರು ಮಂಗಳವಾರ ಎಲ್ ಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇಂದು ದೆಹಲಿಯಲ್ಲಿ ನಡೆದ ಎಲ್ ಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಚಿರಾಗ್ ಅವರನ್ನು ಎಲ್ ಜೆಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ನಿರ್ಗಮಿತ ಅಧ್ಯಕ್ಷ ಹಾಗೂ ಚಿರಾಗ್ ಅವರ ತಂದೆ ರಾಮ್ ವಿಲಾಸ್ ಪಾಸ್ವಾನ್ ಅವರು ತಿಳಿಸಿದ್ದಾರೆ.

ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಚಿರಾಗ್ ಅವರನ್ನು ಎಲ್ ಜೆಪಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಸಂಸ್ಥಾಪಕ ರಾಮ್ ವಿಲಾಸ್ ಪಾಸ್ವಾನ್ ಅವರು ಹೇಳಿದ್ದಾರೆ.

73 ವರ್ಷದ ರಾಮ್ ವಿಲಾಸ್ ಪಾಸ್ವಾನ್ ಅವರು ಬಿಹಾರದಲ್ಲಿ ದಲಿತರ ಬೆಂಬಲದೊಂದಿಗೆ 2000 ದಲ್ಲಿ ಲೋಕ ಜನಶಕ್ತಿ ಪಕ್ಷ(ಎಲ್ ಜೆಪಿ)ಯನ್ನು ಸ್ಥಾಪಿಸಿದ್ದರು.

SCROLL FOR NEXT