ದೇವೇಂದ್ರ ಫಡ್ನವೀಸ್ ಕರೆದ ಸಭೆಯಲ್ಲಿ ’ಸೇನಾ’ ಸಚಿವರು! 
ದೇಶ

ದೇವೇಂದ್ರ ಫಡ್ನವೀಸ್ ಕರೆದ ಸಭೆಯಲ್ಲಿ ’ಸೇನಾ’ ಸಚಿವರು! 

ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆದಿದ್ದ ಸಭೆಗೆ ಶಿವಸೇನೆಯ ಸಚಿವರು ಹಾಜರಾಗಿ ಅಚ್ಚರಿ ಮೂಡಿಸಿದ್ದಾರೆ. 

ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆದಿದ್ದ ಸಭೆಗೆ ಶಿವಸೇನೆಯ ಸಚಿವರು ಹಾಜರಾಗಿ ಅಚ್ಚರಿ ಮೂಡಿಸಿದ್ದಾರೆ. 

ನ.06 ರಂದು ಮುಂಬೈ ನಲ್ಲಿರುವ ಸಹ್ಯಾದ್ರಿ ಅತಿಥಿ ಗೃಹದಲ್ಲಿ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ಸಭೆ ನಡೆಯಿತು. ಈ ಹಿಂದಿನ ಬಿಜೆಪಿ-ಶಿವಸೇನೆ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಶಿವಸೇನೆಯ ಏಕ್ ನಾಥ್ ಶಿಂಧೆ, ರಾಮ್ ದಾಸ್ ಕದಮ್ ಸಭೆಯಲ್ಲಿ ಭಾಗಿಯಾಗಿದ್ದರು. 

ಈ ಸಭೆ ರೈತರಿಗೆ ಸಂಬಂಧಿಸಿದ್ದಾಗಿತ್ತು, ನಾಳೆ ಈ ವಿಷಯ ಚರ್ಚೆಯಾದಾಗ ಶಿವಸೇನೆಯ ಯಾವೊಬ್ಬ ಜನಪ್ರತಿನಿಧಿಯೂ ಬಂದಿರಲಿಲ್ಲ ಎಂಬ ಆಕ್ಷೇಪ ಮಾಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ನಾವು ಈ ಸಭೆಯಲ್ಲಿ ಭಾಗವಹಿಸಿದ್ದೆವು. 25,000 ರೂಪಾಯಿ ಪರಿಹಾರ ಮೊತ್ತವನ್ನು ರೈತರಿಗೆ ತಕ್ಷಣವೇ ನೀಡಬೇಕೆಂದು ಒತ್ತಾಯಿಸಿದ್ದೇವೆ ಎಂದು ಶಿವಸೇನೆ ನಾಯಕ ರಾಮ್ ದಾಸ್ ಕದಮ್ ಹೇಳಿದ್ದಾರೆ. 

ರಾಜ್ಯದಲ್ಲಿ ಮಳೆಯಿಂದಾಗಿ ತೊಂದರೆ ಎದುರಿಸಿರುವ, ಹಾನಿಗೊಳಗಾಗಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡಲು ಮಹಾರಾಷ್ಟ್ರ ಸರ್ಕಾರ 10,000 ಕೋಟಿ ರೂಪಾಯಿಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್