ಮುರಳೀಧರ್ ರಾವ್ - ರಜನಿಕಾಂತ್ 
ದೇಶ

ರಜನಿಕಾಂತ್ ಬಿಜೆಪಿ ಸೇರಿಲ್ಲ: ಮುರಳೀಧರ್ ರಾವ್ ಸ್ಪಷ್ಟನೆ

ಖ್ಯಾತ ತಮಿಳು ನಟ ರಜನಿಕಾಂತ್ ಅವರು ಬಿಜೆಪಿ ಸೇರಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಚೆನ್ನೈ: ಖ್ಯಾತ ತಮಿಳು ನಟ ರಜನಿಕಾಂತ್ ಅವರು ಬಿಜೆಪಿ ಸೇರಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ರಜನಿಕಾಂತ್ ಅವರ ಬಗ್ಗೆ ಯಾವುದೇ ತಪ್ಪು ಕಲ್ಪನೆ ಇಲ್ಲ. ಅವರು ಬಿಜೆಪಿ ಸೇರಿದ್ದಾರೆ ಎಂದು ನಾವು ಯಾವತ್ತೂ ಹೇಳಿಲ್ಲ ಮತ್ತು ಅವರು ಬಿಜೆಪಿ ಸೇರಲು ಸಿದ್ಧರಿದ್ದಾರೆ ಎಂದು ಸಹ ಹೇಳಿಲ್ಲ ಎಂದು ಮುರಳೀಧರ್ ರಾವ್ ಅವರು ಹೇಳಿದ್ದಾರೆ.

ಇತ್ತೀಚಿಗೆ ಹೊಸದಾಗಿ 6 ಕೋಟಿ ಜನ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ. ಇದರೊಂದಿಗೆ ನಮ್ಮ ಪಕ್ಷದ ಸದಸ್ಯರ ಸಂಖ್ಯೆ 17 ರಿಂದ 18 ಕೋಟಿಗೆ ಏರಿಕೆಯಾಗಿದೆ ಎಂದರು.

ಇಂದು ಬೆಳಗ್ಗೆಯಷ್ಟೇ ಹಿರಿಯ ನಟ ರಜನಿಕಾಂತ್ ಅವರು, ತಿರುವಳ್ಳುವರ್ ಜೊತೆಗೆ ತಮ್ಮನ್ನು ಕೇಸರಿ ಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇತ್ತೀಚಿಗೆ ತಮಿಳಿನ ಸಂತ ಕವಿ ತಿರುವಳ್ಳುವರ್ ಪ್ರತಿಮೆಗೆ ಕೇಸರಿಕರಣಗೊಳಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸೂಪರ್ ಸ್ಟಾರ್ ರಜನಿಕಾಂತ್, ತಿರುವಳ್ಳುವರ್ ಜೊತೆಗೆ  ತಮ್ಮನ್ನು ಕೇಸರಿಕರಣಗೊಳಿಸುವ  ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

SCROLL FOR NEXT