ದೇಶ

ಗೃಹ ಸಚಿವ ಅಮಿತ್ ಶಾ ರಿಂದ ದೇಶದ ಕಾನೂನು ಸುವ್ಯವಸ್ಥೆ ಪರಾಮರ್ಶೆ

Sumana Upadhyaya

ನವದೆಹಲಿ: ರಾಮಜನ್ಮ ಭೂಮಿ – ಬಾಬರಿ ಮಸೀದಿ ಪ್ರಕರಣದ ತೀರ್ಪು ಹೊರಬರುತ್ತಿದ್ದಂತೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಿ, ಭದ್ರತಾ ಸ್ಥಿತಿಗತಿಗಳ ಪರಾಮರ್ಶೆ ನಡೆಸಿದ್ದಾರೆ.


ಕಾನೂನು ಸುವ್ಯವಸ್ಥೆ ಕಾಪಾಡಲು ಕೇಂದ್ರ ಗೃಹ ಸಚಿವರ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದ್ದಾರೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ದೇಶದ ವಿವಿಧ ಭಾಗಗಳಲ್ಲಿ ಕಾನೂನು, ಸುವ್ಯವಸ್ಥೆ ಬಗ್ಗೆ ಕೈಗೊಂಡಿರುವ ಕ್ರಮಗಳ ಕುರಿತು ಪರಾಮರ್ಶೆ ಸಭೆಯಲ್ಲಿ ವಿವರ ಕೇಳಿಪಡೆದರು. ಉತ್ತರ ಪ್ರದೇಶ ರಾಜ್ಯದ ಬಗ್ಗೆ ವಿಶೇಷವಾಗಿ ಕೇಳಿ ತಿಳಿದುಕೊಂಡರು.


ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಕೇಂದ್ರ ಗೃಹ ಕಾರ್ಯದರ್ಶಿ ಅಜಿತ್ ಬಲ್ಲಾ, ಗುಪ್ತಚರ ಇಲಾಖೆ ನಿರ್ದೇಶಕ ಅರವಿಂದ್ ಕುಮಾರ್ ಮತ್ತು ಇನ್ನೂ ಕೆಲ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

SCROLL FOR NEXT