ದೇಶ

ಅಯೋಧ್ಯೆ ತೀರ್ಪು ಗೌರವಿಸಿ, ಸಾಮಾಜಿಕ ಸಾಮರಸ್ಯ ಕಾಪಾಡಿ: ರಾಹುಲ್, ಪ್ರಿಯಾಂಕಾ

Lingaraj Badiger

ನವದೆಹಲಿ: ಯೋಧ್ಯೆಯ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪುನ್ನು ಎಲ್ಲರೂ ಸ್ವಾಗತಿಸಬೇಕು ಮತ್ತು ಸಾಮಾಜಿಕ ಸಾಮರಸ್ಯ ಕಾಪಾಡಬೇಕು ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪನ್ನು ನಾವು ಗೌರವಿಸಬೇಕು ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡಬೇಕು. ಎಲ್ಲ ಭಾರತೀಯರು ಸಹೋದರತ್ವ, ನಂಬಿಕೆ ಮತ್ತು ಪ್ರೀತಿಯನ್ನು ಕಾಪಾಡಿಕೊಳ್ಳುವ ಸಮಯವಿದು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. 

ಇನ್ನು ರಾಹುಲ್ ಗಾಂಧಿ ಅವರ ಸಹೋದರಿ ಹಾಗೂ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಹ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದು, ತೀರ್ಪನ್ನು ಗೌರವಿಸುವುದಾಗಿ ಹೇಳಿಕೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಿಯಾಂಕಾ, ಅಯೋಧ್ಯಾ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತನ್ನ ತೀರ್ಪು ನೀಡಿದೆ. ಎಲ್ಲಾ ಪಕ್ಷಗಳು, ಸಮುದಾಯಗಳು ಮತ್ತು ಪ್ರಜೆಗಳು ನಮ್ಮ ದೇಶದ ಶತಮಾನದ ಏಕತೆಯನ್ನು ಕಾಪಾಡಬೇಕು. ನಾವು ಒಟ್ಟಾಗಿ ನಮ್ಮ ಪರಸ್ಪರ ಸೌಹಾರ್ದತೆ ಮತ್ತು ಸಹೋದರತೆಯನ್ನು ಸದೃಢಗೊಳಿಸಬೇಕು ಎಂದಿದ್ದಾರೆ.

SCROLL FOR NEXT