ರಾಮ ಮಂದಿರ ನಿರ್ಮಾಣಕ್ಕೆ ಅಸ್ಸಾಂ ಮುಸ್ಲಿಂ ಸಂಘಟನೆಯಿಂದ 5 ಲಕ್ಷ ರೂಪಾಯಿ!
ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡಿದ್ದು, ತೀರ್ಪಿನ ಬಳಿಕ ಹಿಂದೂ-ಮುಸ್ಲಿಮರ ಸೌಹಾರ್ದತೆ ಸಾರುವಂತಹ ಅತ್ಯುತ್ತಮ ಉದಾಹರಣೆಗಳು ಕಂಡುಬರಿತ್ತಿವೆ.
ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ನೀಡಿದ್ದು, ತೀರ್ಪಿನ ಬಳಿಕ ಹಿಂದೂ-ಮುಸ್ಲಿಮರ ಸೌಹಾರ್ದತೆ ಸಾರುವಂತಹ ಅತ್ಯುತ್ತಮ ಉದಾಹರಣೆಗಳು ಕಂಡುಬರಿತ್ತಿವೆ.
ಮುಸ್ಲಿಮರು ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ. ಈ ನಡುವೆ ಅಸ್ಸಾಂ ನ ಮುಸ್ಲಿಂ ಸಂಘಟನೆಯೊಂದು ರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದೆ.
ಅಸ್ಸಾಂ ನ ಮುಸ್ಲಿಂ ಸಮುದಾಯಗಳು 21 ಸಂಘಟನೆಗಳನ್ನು ಹೊಂದಿದ್ದು, ಜನಗೋಷ್ಟೀಯ ಸಮನ್ನಯ್ ಎಂಬ ಸಹಕಾರ ಸಮಿತಿಯನ್ನು ಹೊಂದಿದೆ. ಈ ಸಮಿತಿ ಕೋರ್ಟ್ ತೀರ್ಪನ್ನು ಸ್ವಾಗತಿಸುವುದಾಗಿ ಹೇಳಿದೆ. ಅಷ್ಟೇ ಅಲ್ಲದೇ 5 ಲಕ್ಷ ರೂಪಾಯಿ ಮಂದಿರ ನಿರ್ಮಾಣಕ್ಕಾಗಿ ನೀಡುವುದಾಗಿಯೂ ಹೇಳಿದೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.