ಸಂಗ್ರಹ ಚಿತ್ರ 
ದೇಶ

ಜಾರ್ಖಂಡ್ ವಿಧಾನಸಭೆ ಚುನಾವಣೆ: 52 ಅಭ್ಯರ್ಥಿಗಳ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ

ಜಾರ್ಖಂಡ್ ವಿಧಾನಸಭೆ ಚುನಾವಣೆ ನಿಮಿತ್ತ ಬಿಜೆಪಿ ತನ್ನ 52 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆ ನಿಮಿತ್ತ ಬಿಜೆಪಿ ತನ್ನ 52 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಪಟ್ಟಿಯಲ್ಲಿ 17 ಬುಡಕಟ್ಟು ಜನಾಂಗ,  21 ಇತರೆ ಹಿಂದುಳಿದ ವರ್ಗ ಮತ್ತು ಐವರು ಮಹಿಳಾ ಅಭ್ಯರ್ಥಿಗಳು ಸ್ಥಾನ ಪಡೆದಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಘೋಷಿಸಿದ್ದಾರೆ.

ಬಿಜೆಪಿ ಅಧ್ಯಕ್ಷ ಲಕ್ಷ್ಮಣ್ ಗಿಲುವಾ ಅವರು ಛಕ್ರಾಧರ್‌ಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಮುಖ್ಯಮಂತ್ರಿ ರಘುಬರ್ ದಾಸ್ ಜೆಮ್‌ಶೆಡ್‌ಪುರ ಪೂರ್ವ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಜಾರ್ಖಂಡ್‌ನಲ್ಲಿ ಐದು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 30ರಂದು 13 ವಿಧಾನಸಭೆ ಕ್ಷೇತ್ರಗಳಿಗೆ ಮೊದಲ ಹಂತವಾಗಿ, ಡಿಸೆಂಬರ್ 07ರಂದು 20 ಕ್ಷೇತ್ರಗಳಿಗೆ, ಡಿಸೆಂಬರ್ 12ರಂದು 17 ಕ್ಷೇತ್ರಗಳಿಗೆ, ಡಿಸೆಂಬರ್ 16ರಂದು 15 ಮತ್ತು ಡಿಸೆಂಬರ್ 20ರಂದು 16 ಕ್ಷೇತ್ರಗಳಿಗೆ ಐದನೇ ಮತ್ತು ಕೊನೆಯ ಹಂತದ ಮತದಾನ ನಡೆಯಲಿದ್ದು, ಡಿಸೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!