ಭಾರತೀಯ ಸೇನೆ 
ದೇಶ

ಕಾಶ್ಮೀರ: ಬಂಡಿಪೋರಾ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ

ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಸೋಮವಾರ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ನಿನ್ನೆ ರಾಜಧಾನಿ ಶ್ರೀನಗರದಿಂದ ಕೇವಲ 55 ಕಿಮೀ ದೂರದಲ್ಲಿರುವ ಲಾವ್ಡಾರಾ ಗ್ರಾಮದಲ್ಲಿ ನಡೆದ ಸೇನಾ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯ್ಯಲಾಗಿತ್ತು.

ಈ ಪ್ರದೇಶದಲ್ಲಿ ಉಗ್ರರು ಅವಿತಿರುವ ಕುರಿತು ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಸೈನಿಕರನ್ನು ಕಂಡ ಉಗ್ರರು ಗುಂಡಿನ ಸುರಿಮಳೆ ಗರೆದಿದ್ದಾರೆ. ಇದಕ್ಕೆ ಸೇನೆ ಕೂಡ ಪ್ರತ್ಯುತ್ತರ ನೀಡಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.

ಪ್ರದೇಶದಲ್ಲಿ ಮೂರಕ್ಕೂ ಹೆಚ್ಚು ಉಗ್ರರು ಇರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!

ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ