ದೇಶ

'ಮಹಾ' ರಾಜಕೀಯಕ್ಕೆ ಬಿಗ್ ಟ್ವಿಸ್ಟ್ : ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲರ ಶಿಫಾರಸು!

Nagaraja AB

ಮುಂಬೈ: ಕ್ಷಣಕ್ಕೊಂದು ರೀತಿಯ ರಾಜಕೀಯ ತಿರುವುಗಳನ್ನು ಪಡೆಯುತ್ತಿರುವ  ಮಹಾರಾಷ್ಟ್ರ ರಾಜಕೀಯದಲ್ಲಿ ಇದೀಗ ಮತ್ತೊಂದು ಹೊಸ ಟ್ವಿಸ್ಟ್ ಉಂಟಾಗಿದೆ.

ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನಾ ವಿಫಲವಾದ ಬೆನ್ನಲ್ಲೇ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

ಸರ್ಕಾರ ರಚಿಸಲು ಇಂದು ರಾತ್ರಿ 8-30ರವರೆಗೆ ಸಮಯ ನೀಡಿದ ನಂತರ ಅಗತ್ಯ ಸಂಖ್ಯಾಬಲವನ್ನು ಒಗ್ಗೂಡಿಸಲು ಎನ್ ಸಿಸಿ ಪ್ರಯತ್ನಿಸುತ್ತಿರುವ ಬೆನ್ನಲ್ಲೇ ರಾಜ್ಯಪಾಲರು ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಈ ಸಂಬಂಧ ವರದಿಯನ್ನು ಸಲ್ಲಿಸಿದ್ದಾರೆ.

ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್  ಬೆಳಗ್ಗೆ ಸೋನಿಯಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದು, ಮಧ್ಯಾಹ್ನ ನಡೆಯಲಿರುವ ಸಭೆಯಲ್ಲಿ ಮುಂದಿನ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. 

SCROLL FOR NEXT