ಅಯೋಧ್ಯಾ 
ದೇಶ

ಅಯೋಧ್ಯೆ ತೀರ್ಪು: ಮಸೀದಿಗೆ 5 ಎಕರೆ ಭೂಮಿ ಯಾಕೆ..? ಮಹಾಸಭಾದಿಂದ ಪರಿಶೀಲನಾ ಅರ್ಜಿ?

ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅಖಿಲ ಭಾರತೀಯ ಹಿಂದೂ ಮಹಾಸಭಾ ಮರು ಪರಿಶೀಲನಾ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ನವದೆಹಲಿ: ಅಯೋಧ್ಯೆಯಲ್ಲಿ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿ ನೀಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅಖಿಲ ಭಾರತೀಯ ಹಿಂದೂ ಮಹಾಸಭಾ ಮರು ಪರಿಶೀಲನಾ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.

ಅಯೋಧ್ಯೆಯ ಪ್ರಮುಖ ಸ್ಥಳದಲ್ಲೇ ಮಸೀದಿ ನಿರ್ಮಾಣಕ್ಕೆ 5 ಎಕರೆ ಭೂಮಿಯನ್ನು ಬಾಬರಿ ಮಸೀದಿ ಪರ ಹೋರಾಡುತ್ತಿದ್ದ ಸುನ್ನಿ ವಕ್ಫ್ ಬೋರ್ಡ್ ಗೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು ಈ ನಿರ್ದೇಶನದ ಬಗ್ಗೆ ಹಿಂದೂ ಮಹಾಸಭಾ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಂಬಂಧ ಪರಿಶೀಲನಾ ಅರ್ಜಿ ಸಲ್ಲಿಸಲು ಅಧ್ಯಯನ ಮಾಡುತ್ತಿದ್ದೇವೆ ಎಂದು ಹಿಂದೂ ಮಹಾಸಭಾ ಹೇಳಿದೆ.

ಅಯೋಧ್ಯೆಯಲ್ಲಿ ದೇವಾಲಯ ಇತ್ತು ಎಂದು ಸಾಬೀತಾದರೆ ಸುನ್ನಿ ವಕ್ಫ್ ಬೋರ್ಡ್ ಗೆ ಯಾಕೆ ಭೂಮಿಯನ್ನು ನೀಡಬೇಕು. ಹೀಗಾಗಿ ಪ್ರಸ್ತುತ ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಅಧ್ಯಯನ ಮಾಡುತ್ತಿದ್ದೇವೆ. ನಂತರ ಪರಿಶೀಲನಾ ಅರ್ಜಿಯನ್ನು ಸಲ್ಲಿಸುವ ಬಗ್ಗೆ ನಿರ್ಧರಿಸುತ್ತೇವೆ ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾ ಅಧ್ಯಕ್ಷ ಶಿಶಿರ್ ಚತುರ್ವೇದಿ ಹೇಳಿದ್ದಾರೆ. 

ಸುಪ್ರೀಂ ಕೋರ್ಟ್ ವಿವಾದಿತ ಭೂಮಿಯನ್ನು ರಾಮಲಲ್ಲಾಗೆ ನೀಡಿತ್ತು. ಇನ್ನು ಬಾಬರಿ ಮಸೀದಿ ಧ್ವಂಸ ಮಾಡಿ ಮತ್ತೊಂದು ಧರ್ಮದ ಆಚರಣೆಗೆ ಧಕ್ಕೆ ಮಾಡಲಾಗಿದೆ. ಹೀಗಾಗಿ ಅವರಿಗೆ ಅಯೋಧ್ಯೆಯಲ್ಲೇ 5 ಎಕರೆ ಭೂಮಿಯನ್ನು ನೀಡಲು ಆದೇಶಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ