ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ನ್ಯಾಯಾಂಗ ಬಂಧನ ಅವಧಿ ನ. 27ರ ವರೆಗೆ ವಿಸ್ತರಣೆ

Lingaraj Badiger

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ ನ್ಯಾಯಾಲಯ ನವೆಂಬರ್ 27ರ ವರೆಗೆ ವಿಸ್ತರಿಸಿದೆ.

ದೆಹಲಿ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಬುಧವಾರ ಈ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ನ್ಯಾಯಾಲಯಗಳಲ್ಲಿ ವಕೀಲರ ಮುಷ್ಕರದ ಪರಿಣಾಮ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಯ ವಿಚಾರಣೆ ಮಾಡಲಾಗಿದೆ.

ಈ ನಡುವೆ ಕಸ್ಟಡಿ ಅವಧಿಯನ್ನು ವಿಸ್ತರಣೆ ಮಾಡಬೇಕೆಂದು ಜಾರಿ ನಿರ್ದೇಶನಾಲಯ ಮಾಡಿಕೊಂಡಿದ್ದ ಮನವಿಗೆ ನ್ಯಾಯಾಲಯ ಸಮ್ಮತಿ ನೀಡಿ, ಚಿದಂಬರಂ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇದೇ 27ರ ವರೆಗೆ ವಿಸ್ತರಿಸಿದೆ.

ಐಎನ್ಎಕ್ಸ್ ಮಾಧ್ಯಮ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪದ ಮೇರೆಗೆ ಸಿಬಿಐ, ಕಳೆದ ಆಗಸ್ಟ್ 21 ರಂದು ಚಿದಂಬರಂ ಅವರನ್ನು ಬಂಧಿಸಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ 2017 ರಲ್ಲಿ ಎಫ್ ಐ ಆರ್ ದಾಖಲು ಮಾಡಿತ್ತು.

SCROLL FOR NEXT