ಚಿದಂಬರಂ 
ದೇಶ

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ದೆಹಲಿ ಹೈಕೋರ್ಟ್ ನಲ್ಲಿ ಚಿದಂಬರಂಗೆ ಜಾಮೀನು ನಕಾರ

ಇಡಿ ದಾಖಲಿಸಿದ್ದ ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಶುಕ್ರವಾರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಜಾಮೀನು ನಿರಾಕರಿಸಿದೆ, ಚಿದಂಬರಂ ಅವರ ವಿರುದ್ಧ ಪ್ರಾಥಮಿಕ ಆರೋಪಗಳು ಸ್ವಭಾವತಃ ಗಂಭೀರವಾಗಿದೆ ಮತ್ತು ಅವರು ಅಪರಾಧದಲ್ಲಿ ಸಕ್ರಿಯ ಮತ್ತು ಪ್ರಮುಖ ಪಾತ್ರ ವಹಿಸಿದ್ದಾರೆ, ಅವರಿಗೆ ಜಾಮೀನು ಕೊಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದ

ನವದೆಹಲಿ: ಇಡಿ ದಾಖಲಿಸಿದ್ದ ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಶುಕ್ರವಾರ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂಗೆ ಜಾಮೀನು ನಿರಾಕರಿಸಿದೆ, ಚಿದಂಬರಂ ಅವರ ವಿರುದ್ಧ ಪ್ರಾಥಮಿಕ ಆರೋಪಗಳು ಸ್ವಭಾವತಃ ಗಂಭೀರವಾಗಿದೆ ಮತ್ತು ಅವರು ಅಪರಾಧದಲ್ಲಿ ಸಕ್ರಿಯ ಮತ್ತು ಪ್ರಮುಖ ಪಾತ್ರ ವಹಿಸಿದ್ದಾರೆ, ಅವರಿಗೆ ಜಾಮೀನು ಕೊಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಈ ಪ್ರಕರಣದಲ್ಲಿ ಚಿದಂಬರಂಗೆ ಜಾಮೀನು ನೀಡಿದರೆ ಸಮಾಜಕ್ಕೆ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ನ್ಯಾಯಮೂರ್ತಿ ಸುರೇಶ್ ಕೈಟ್ ಹೇಳಿದರು. "ನಾನು ಜಾಮೀನು ನೀಡಲು ಒಲವು ತೋರುತ್ತಿಲ್ಲ" ಎಂದು ನ್ಯಾಯಮೂರ್ತಿ ಕೈಟ್ ಹೇಳಿದರು. ತೀರ್ಪನ್ನು ಉಚ್ಚರಿಸುವಾಗ, ಮನಿ ಲಾಂಡರಿಂಗ್ ಪ್ರಕರಣದಲ್ಲಿ ಇಡಿ ಸಂಗ್ರಹಿಸಿದ ದಾಖಲೆಗಳು ಮುಖ್ಯವಾಗಿದೆ. ಇದಕ್ಕೆ ಹಿಂದೆ  ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸಂಗ್ರಹಿಸಿದ ವಸ್ತುಗಳಿಗಿಂತ ಭಿನ್ನವಾಗಿದೆ.  ಈ ಪ್ರಕರಣದಲ್ಲಿ ನಡೆಸಿದ ತನಿಖೆಯು ಸಿಬಿಐ ಪ್ರಕರಣಕ್ಕಿಂತ ಭಿನ್ನವಾಗಿದೆ ಎಂದು ನ್ಯಾಯಾಲಯ ಹೇಳಿದೆ, 

ನವೆಂಬರ್ 8 ರಂದು ಚಿದಂಬರಂ ಮತ್ತು ಜಾರಿ ನಿರ್ದೇಶನಾಲಯ (ಇಡಿ) ಪರ ವಕೀಲರ ವಾದಗಳನ್ನು ಆಲಿಸಿದ ನಂತರ ಆದೇಶವನ್ನು ಕಾಯ್ದಿರಿಸಿತ್ತು

ಅಕ್ಟೋಬರ್ 16 ರಂದು ಮನಿ ಲಾಂಡರಿಂಗ್ ಪ್ರಕರಣದಲ್ಲಿ ಚಿದಂಬರಂ ಬಂಧಿಸಲ್ಪಟ್ಟಿದ್ದರು. ಪ್ರಸ್ತುತ ಅವರು ವಿಚಾರಣಾ ನ್ಯಾಯಾಲಯದ ಆದೇಶದ ಮೇರೆಗೆ ನವೆಂಬರ್ 27 ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ. ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಆಗಸ್ಟ್ 21 ರಂದು ಚಿದಂಬರಂ ಅವರನ್ನು ಸಿಬಿಐ ಬಂಧಿಸಿತ್ತು ಮತ್ತು ಅಕ್ಟೋಬರ್ 22 ರಂದು ಸುಪ್ರೀಂ ಕೋರ್ಟ್  ಆ ಪ್ರಕರಣದಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್