ದೇಶ

ಜಾರ್ಖಂಡ್: ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಮಧು ಕೋಡಾಗೆ ಅನುಮತಿ ನಿರಾಕರಣೆ

Lingaraj Badiger

ನವದೆಹಲಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರಿಗೆ ಸುಪ್ರೀಂ ಕೋರ್ಟ್ ಅನುಮತಿ ನಿರಾಕರಿಸಿದೆ.

ಮಧು ಕೋಡಾ ಅನರ್ಹತೆ ಇನ್ನೂ ಒಂದು ವರ್ಷ ಬಾಕಿ ಇರುವುದರಿಂದ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವುದಿಲ್ಲ. ಅರ್ಜಿಯ ಸಂಬಂಧ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಮಾಡಿದ್ದ ಖರ್ಚು ವೆಚ್ಚಗಳ ಬಗ್ಗೆ ಪ್ರಮಾಣಪತ್ರವನ್ನು ಸಮರ್ಪಕ ನಮೂನೆಯಲ್ಲಿ ಸಲ್ಲಿಸದ ಕಾರಣ 2017ರಲ್ಲಿ ಕೋಡಾ ಅವರ ಶಾಸಕತ್ವವನ್ನು ಅನರ್ಹಗೊಳಿಸಲಾಗಿತ್ತು.

2006ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದಿದ್ದ ಮಧು ಕೋಡಾ ಅವರು 2006 ರಿಂದ 2008ರ ವರೆಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿದ್ದರು.

SCROLL FOR NEXT