ನಿರ್ಮಲಾ ಸೀತಾರಾಮನ್ 
ದೇಶ

ಮಾರ್ಚ್‌ ಒಳಗೆ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ, ಭಾರತ್ ಪೆಟ್ರೋಲಿಯಂ ಮಾರಾಟ: ನಿರ್ಮಲಾ ಸೀತಾರಾಮನ್

2020ರ ಮಾರ್ಚ್ ಒಳಗೆ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಸಂಸ್ಥೆಯನ್ನು ಮಾರಾಟ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ನವದೆಹಲಿ: 2020ರ ಮಾರ್ಚ್ ಒಳಗೆ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಮತ್ತು ಭಾರತ್ ಪೆಟ್ರೋಲಿಯಂ ಸಂಸ್ಥೆಯನ್ನು ಮಾರಾಟ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಒಂದು ಲಕ್ಷ ಕೋಟಿ ರುಪಾಯಿಗಳನ್ನು ಕ್ರೋಢಿಕರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಎರಡು ಸಂಸ್ಥೆಗಳನ್ನು ಮಾರಾಟ ಮಾಡಲಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆಗಳು ಮುಂದುವರೆದಿದ್ದು ಇದೇ ವರ್ಷ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ನಿರ್ಮಲಾ ಹೇಳಿದ್ದಾರೆ.

ವಿಮಾನಯಾನ ಸಂಸ್ಧೆ ಏರ್ ಇಂಡಿಯಾ ಮಾರಾಟದ ಸಂಬಂಧ ಅಂತಾರಾಷ್ಟ್ರೀಯ ರೋಡ್ ಶೋಗಳಲ್ಲಿ ಹೂಡಿಕೆದಾರರಿಂದ ವ್ಯಾಪಕ ಆಸಕ್ತಿ ವ್ಯಕ್ತವಾಗಿದೆ. ಒಂದು ವರ್ಷದ ಹಿಂದೆಯೇ ಮಾರಾಟ ಮಾಡುವ ಪ್ರಕ್ರಿಯೆ ನಡೆದಿತ್ತು. ಆದರೆ ಅಂದು ಹೂಡಿಕೆದಾರರಿಂದ ಸೂಕ್ತ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು ಎಂದರು.

ತೆರಿಗೆ ಸಂಗ್ರಹ ಒತ್ತಡದ ಸ್ಥಿತಿಯಲ್ಲಿ ಈ ಬಂಡವಾಳ ಹಿಂದೆಗೆತ ಕ್ರಮದಿಂದ ಸರ್ಕಾರ ಆದಾಯ ಹೆಚ್ಚುವ ನಿರೀಕ್ಷೆ ಇದೆ. ಆರ್ಥಿಕ ಹಿಂಜರಿತವನ್ನು ತಡೆಯಲು ಸರ್ಕಾರ ಸಕಾಲದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡಿದ್ದು ಹಲವು ವಲಯಗಳು ಒತ್ತಡದಿಂದ ಹೊರಬರುತ್ತಿವೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT