ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ರಾಜಸ್ಥಾನ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ, 10 ಮಂದಿ ದುರ್ಮರಣ

ಬಸ್ ಮತ್ತು ಟ್ರಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ದುರ್ಮರಣವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕನೆರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಸಾಂದರ್ಭಿಕ ಚಿತ್ರ
Manjula VN
Updated On : 18 Nov 2019, 12:31 pm

ಬಿಕಾನೆರ್: ಬಸ್ ಮತ್ತು ಟ್ರಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ದುರ್ಮರಣವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕನೆರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. 

ಖಾಸಗಿ ಬಸ್ ವೊಂದು ಬಿಕಾನೆರ್ ನಿಂದ ಜೈಪುರಕ್ಕೆ ತೆರಳುತ್ತಿತ್ತು. ಈ ವೇಳೆ ದುಂಗಾರ್ಗರ್ಹ್ ಬಳಿ ಇಂದು ಬೆಳಿಗ್ಗೆ ರಸ್ತೆಯಲ್ಲಿ ತೆರಳುತ್ತಿದ್ದ ಟ್ರಕ್'ಗೆ ರಭಸದಿಂದ ಡಿಕ್ಕಿ ಹೊಡಿದಿದೆ. ಪರಿಣಾಮ ಸ್ಥಳದಲ್ಲಿಯೇ 5 ಮಂದಿ ಸಾವನ್ನಪ್ಪಿದ್ದಾರೆ. ಬಳಿಕ 5 ಮಂದಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಘಟನೆಯಲ್ಲಿ 22 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದುರ್ಘಟನೆಗೆ ಪ್ರಮುಖ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. 

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement