ದೇಶ

ಸಿಯಾಚಿನ್ ಹಿಮಪಾತ: ನಾಲ್ವರು ಯೋಧರು ಸೇರಿ ಆರು ಮಂದಿ ಸಾವು

Nagaraja AB

ನವದೆಹಲಿ: ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್ ಉತ್ತರ ಭಾಗದಲ್ಲಿ ಇಂದು ಸಂಭವಿಸಿದ್ದ ಹಿಮಪಾತದಿಂದ ನಾಲ್ವರು ಯೋಧರು ಹಾಗೂ ಇಬ್ಬರು ನಾಗರಿಕರು ಹಿಮದಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿನಲ್ಲಿ ಭಾರಿ ಹಿಮಪಾತವಾಗಿದೆ. ಹತ್ತಿರದಲ್ಲಿಯೇ ಇದ್ದ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದು, ಹಿಮದಡಿಯಲ್ಲಿ ಸಿಲುಕಿದವರನ್ನು ಹೊರಗೆ  ತಂದಿದ್ದಾರೆ. ನಂತರ ಎಲ್ಲರನ್ನೂ ಹೆಲಿಕಾಪ್ಟರ್ ಮೂಲಕ ಹತ್ತಿರದ ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಎಲ್ಲಾ ಪ್ರಯತ್ನಗಳ ಹೊರತಾಗಿಯೂ ನಾಲ್ವರು ಯೋಧರು ಹಾಗೂ ಇಬ್ಬರು ನಾಗರಿಕರು ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಸಮುದ್ರ ಮಟ್ಟಕ್ಕಿಂತ 18 ಸಾವಿರದಿಂದ 19 ಸಾವಿರ ಅಡಿ ಎತ್ತರದ ಪ್ರದೇಶದಲ್ಲಿ ಹಿಮಪಾತವಾಗಿದೆ. ಈ ಸಂದರ್ಭದಲ್ಲಿ ಯೋಧರು ಗಸ್ತು ತಿರುಗುತ್ತಿದ್ದಾಗಿ ಅವರು ಹೇಳಿದ್ದಾರೆ.

SCROLL FOR NEXT