ದೆಹಲಿಯ ಶಕ್ತಿ ಸ್ಥಳದಲ್ಲಿ ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಸಮಾಧಿಗೆ ಗೌರವ ನಮನ ಸಲ್ಲಿಸಿದ ಸೋನಿಯಾ ಗಾಂಧಿ 
ದೇಶ

ಇಂದಿರಾ ಗಾಂಧಿ ಜಯಂತಿ: ಸೋನಿಯಾ ಗಾಂಧಿ, ಡಾ ಮನಮೋಹನ್ ಸಿಂಗ್ ಸೇರಿ ಕಾಂಗ್ರೆಸ್ ನಾಯಕರಿಂದ ಗೌರವ ನಮನ 

ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮ ದಿನಾಚರಣೆ ಅಂಗವಾಗಿ ದೆಹಲಿಯ ಶಕ್ತಿ ಸ್ಥಳದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಗೌರವ ನಮನ ಸಲ್ಲಿಸಿದರು.

ನವದೆಹಲಿ: ದಿವಂಗತ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಜನ್ಮ ದಿನಾಚರಣೆ ಅಂಗವಾಗಿ ದೆಹಲಿಯ ಶಕ್ತಿ ಸ್ಥಳದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಗೌರವ ನಮನ ಸಲ್ಲಿಸಿದರು.


ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮತ್ತು ಇನ್ನೂ ಹಲವು ನಾಯಕರು ಇಂದಿರಾ ಗಾಂಧಿಯವರ ಸಮಾಧಿ ಬಳಿ ತೆರಳಿ ಗೌರವ ನಮನ ಸಲ್ಲಿಸಿದರು. 


ಇಂದಿರಾ ಗಾಂಧಿಯವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಭಾರತದ ಮೊದಲ ಮಹಿಳಾ ಪ್ರಧಾನಿಗೆ ಗೌರವ ನಮನಗಳು. ಅವರ ಮನಃಶಕ್ತಿ ಮತ್ತು ದೃಢ ನಿಶ್ಚಯ ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ. ದೇಶದ ಭದ್ರತೆ, ಆರ್ಥಿಕತೆ ಮತ್ತು ವಿದೇಶಿ ನೀತಿಗಳಿಗೆ ಇಂದಿರಾ ಗಾಂಧಿಯವರ ಕೊಡುಗೆ ಯಾವತ್ತಿಗೂ ಮರೆಯಲಾಗದಂತಹದ್ದು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 


1917ರ ನವೆಂಬರ್ 19ರಂದು ಜನಿಸಿದ್ದ ಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾ ಗಾಂಧಿಯವರು ಜವಹರಲಾಲ್ ನೆಹರೂ ಮತ್ತು ಕಮಲಾ ನೆಹರೂ ಅವರ ಏಕೈಕ ಪುತ್ರಿ. ಅವರು 1966ರಿಂದ 1977ರವರೆಗೆ ಮತ್ತು 1980ರಿಂದ ಅವರ ಹತ್ಯೆಯಾಗುವ 1984ರವರೆಗೆ ಪ್ರಧಾನ ಮಂತ್ರಿಯಾಗಿದ್ದರು.


ಇಂದಿರಾ ಗಾಂಧಿಯವರು 1984ರ ಅಕ್ಟೋಬರ್ 31ರಂದು ದೆಹಲಿಯ ಅಕ್ಬರ್ ರಸ್ತೆಯಲ್ಲಿದ್ದ ಅವರ ನಿವಾಸದಲ್ಲಿ ಅವರ ಸ್ವಂತ ಸಿಖ್ ಅಂಗರಕ್ಷಕರಿಂದ ಹತ್ಯೆಗೊಳಗಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT