ರಜನಿಕಾಂತ್ - ಕಮಲ್ ಹಾಸನ್ 
ದೇಶ

ಅಗತ್ಯಬಿದ್ದರೆ ಮಾತ್ರ ರಜನಿಕಾಂತ್ ಜೊತೆ ಕೈಜೋಡಿಸುತ್ತೇನೆ: ಕಮಲ್ ಹಾಸನ್

ಅಗತ್ಯಬಿದ್ದರೆ ಮಾತ್ರ ರಾಜಕೀಯದಲ್ಲಿ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರೊಂದಿಗೆ ಕೈ ಜೋಡಿಸುವುದಾಗಿ ಮಕ್ಕಳ್ ನೀಧಿ ಮಯ್ಯಂ ಸಂಸ್ಥಾಪಕ, ನಟ ನಮಲ್ ಹಾಸನ್ ಅವರು ಹೇಳಿದ್ದಾರೆ.

ಚೆನ್ನೈ: ಅಗತ್ಯಬಿದ್ದರೆ ಮಾತ್ರ ರಾಜಕೀಯದಲ್ಲಿ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರೊಂದಿಗೆ ಕೈ ಜೋಡಿಸುವುದಾಗಿ ಮಕ್ಕಳ್ ನೀಧಿ ಮಯ್ಯಂ ಸಂಸ್ಥಾಪಕ, ನಟ ನಮಲ್ ಹಾಸನ್ ಅವರು ಹೇಳಿದ್ದಾರೆ.

ಕಾಲಿವುಡ್ ಸ್ಟಾರ್ ನಟರಾದ ಕಮಲ್ ಹಾಸನ್ ಮತ್ತು ರಜನಿಕಾಂತ್ ಇಬ್ಬರೂ ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ ತಾವು ಕೈ ಜೋಡಿಸಲು ಸಿದ್ಧ ಎಂದು ಹೇಳುವ ಮೂಲಕ ಅಭಿಮಾನಿಗಳಿಗೆ ಸಂತಸ ಮೂಡಿಸಿದ್ದಾರೆ.

ನನ್ನ ಸ್ನೇಹಿತ ರಜನಿಕಾಂತ್ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಕಳೆದ 44 ವರ್ಷಗಳಿಂದಲೂ ಚಿತ್ರರಂಗದಲ್ಲಿ ಜೊತೆಯಲ್ಲಿದ್ದೇವೆ. ನಾವು ರಾಜಕೀಯದಲ್ಲೂ ಒಂದಾದರೆ ಅದರಲ್ಲಿ ಆಶ್ಚರ್ಯ ಪಡುವ ವಿಷಯವೇನೂ ಇಲ್ಲ. ಒಂದು ವೇಳೆ ಅಗತ್ಯಬಿದ್ದರೆ ತಮಿಳುನಾಡಿನ ಅಭಿವೃದ್ದಿಗಾಗಿ ನಾವಿಬ್ಬರೂ ಒಂದಾಗುತ್ತೇವೆ ಎಂದು ಕಮಲ್ ಹಾಸನ್ ಅವರು ಹೇಳಿದ್ದಾರೆ.

ಇನ್ನು ಕಮಲ್ ಹಾಸನ್ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಸೂಪರ್​ಸ್ಟಾರ್ ರಜನಿಕಾಂತ್, ಸಂದರ್ಭ ಕೂಡಿಬಂದರೆ ರಾಜಕಾರಣದಲ್ಲಿ ಕಮಲ್ ಹಾಸನ್ ಜೊತೆ ಸೇರಲು ನಾನೂ ಸಿದ್ಧನಿದ್ದೇನೆ. ಇಬ್ಬರ ನಡುವೆಯೂ ಉತ್ತಮ ಬಾಂಧವ್ಯವಿದೆ. ಆ ಬಾಂಧವ್ಯ ರಾಜಕಾರಣದಲ್ಲೂ ಮುಂದುವರೆಯಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ