ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ತಿಹಾರ್ ಜೈಲಿನಲ್ಲಿ ಚಿದಂಬರಂ ವಿಚಾರಣೆಗೆ ದೆಹಲಿ ಕೋರ್ಟ್ ಅಸ್ತು

Lingaraj Badiger

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಮಾಜಿ ವಿತ್ತ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿಯೇ ವಿಚಾರಣೆಗೆ ಒಳಪಡಿಸಲು ದೆಹಲಿ ಕೋರ್ಟ್ ಗುರುವಾರ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ಅನುಮತಿ ನೀಡಿದೆ.

ಪಿ ಚಿದಂಬರಂ ಅವರನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಲು ಅನುಮತಿ ಕೋರಿ ಇಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹರ್ ಅವರು, ನವೆಂಬರ್ 22 ಮತ್ತು 23ರಂದು ತಿಹಾರ್ ಜೈಲಿನಲ್ಲಿಯೇ ಆರೋಪಿಯ ವಿಚಾರಣೆ ನಡೆಸಲು ಅನುಮತಿ ನೀಡಿದ್ದಾರೆ.

ಇದಕ್ಕು ಮುನ್ನ ಕೋರ್ಟ್ ಚಿದಂಬರಂ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್ 27ರ ವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು.

ಇದೇ ಪ್ರಕರಣದಲ್ಲಿ ಚಿದಂಬರಂ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ದೆಹಲಿ ಹೈಕೋರ್ಟ್ ನಿರಾಕರಿಸಿದ್ದು, ಇದನ್ನು ಪ್ರಶ್ನೆ ಮಾಡಿ ಜಾಮೀನು ಕೊಡುವಂತೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜಾರಿ ನಿರ್ದೇಶನಾಲಯಕ್ಕೆ ಪ್ರತಿಕ್ರಿಯೆ ಸಲ್ಲಿಸುವಂತೆ ನೊಟೀಸ್ ಜಾರಿ ಮಾಡಿದೆ.

SCROLL FOR NEXT