ರಜನಿಕಾಂತ್ 
ದೇಶ

2021ರ ವಿಧಾನಸಭೆ ಚುನಾವಣೆಯಲ್ಲಿ ಪವಾಡ ನಡೆಯಲಿದೆ: ಚುನಾವಣಾ ರಾಜಕೀಯದ ಸುಳಿವು ನೀಡಿದ ರಜನಿ

2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪವಾಡ ನಡೆಯಲಿದೆ ಮತ್ತು ತಮಿಳು ಜನ ಅಂತಹ ಅದ್ಭುತ ಸೃಷ್ಟಿಸಲಿದ್ದಾರೆ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುರುವಾರ ಹೇಳಿದ್ದಾರೆ.

ಚೆನ್ನೈ: 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪವಾಡ ನಡೆಯಲಿದೆ ಮತ್ತು ತಮಿಳು ಜನ ಅಂತಹ ಅದ್ಭುತ ಸೃಷ್ಟಿಸಲಿದ್ದಾರೆ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುರುವಾರ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಆಧ್ಯಾತ್ಮಿಕ ರಾಜಕೀಯಕ್ಕೆ ಅವಕಾಶ ಇಲ್ಲ ಎಂಬ ಮೀನುಗಾರಿಕೆ ಸಚಿವ ಡಿ ಜಯಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಜನಿಕಾಂತ್, 2021ರಲ್ಲಿ ತಮಿಳುನಾಡಿನ ಜನ ಒಂದು ದೊಡ್ಡ ಪವಾಡ ಸೃಷ್ಟಿಸಲಿದ್ದಾರೆ. ಇದು ಶೇ.100ರಷ್ಟು ಖಚಿತ ಎಂದು ಹೇಳುವ ಮೂಲಕ 2021ರಲ್ಲಿ ಚುನಾವಣಾ ಅಖಾಡಕ್ಕಿಳಿಯುವ ಸೂಚನೆ ನೀಡಿದ್ದಾರೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಮಿಳು ಹಿರಿಯ ನಟ, ರಾಜಕಾರಣದಲ್ಲಿ ಅದ್ಭುತಗಳು ಮತ್ತು ಪವಾಡಗಳು ಸಂಭವಿಸುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ.

ಇನ್ನು ರಜನಿಕಾಂತ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು, ಅವರು ಯಾವ ಪವಾಡದ ಬಗ್ಗೆ ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಮತ್ತು ಯಾವ ಆಧಾರದ ಮೇಲೆ ಪವಾಡ ನಡೆಯುತ್ತದೆ ಎಂಬುದು ನನಗೆ ಗೊತ್ತಿಲ್ಲ. 2021ರಲ್ಲಿ ಮತ್ತೆ ಎಐಎಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಮತ್ತು ಇದು ಪವಾಡಕ್ಕಾಗಿ ನಾನು ಕಾಯುತ್ತಿದ್ದೇವೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video