ನಿತ್ಯಾನಂದ 
ದೇಶ

ನಿತ್ಯಾನಂದ ದೇಶ ಬಿಟ್ಟು ಪರಾರಿ; ಅಗತ್ಯಬಿದ್ದರೆ ಬಂಧಿಸುತ್ತೇವೆ: ಗುಜರಾತ್ ಪೊಲೀಸರು 

ಆಶ್ರಮಕ್ಕೆ ಸಂಬಂಧಿಸಿದ ಕ್ರಿಮಿನಲ್ ಕೇಸಿಗೆ ಸಂಬಂಧಪಟ್ಟಂತೆ ಸ್ವಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ದೇಶ ಬಿಟ್ಟು ಪಲಾಯನಗೈದಿದ್ದು ಅವರ ವಿರುದ್ಧ ಸಾಕ್ಷಿ ಸಂಗ್ರಹಿಸಲು ಗುಜರಾತ್ ಪೊಲೀಸರು ಸತತ ಪ್ರಯತ್ನ ಮುಂದುವರಿಸಿದ್ದಾರೆ. 

ಅಹ್ಮದಾಬಾದ್; ಆಶ್ರಮಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣ ಬೆಳಕಿಗೆ ಬಂದ ನಂತರ ಸ್ವಘೋಷಿತ ದೇವಮಾನವ ಸ್ವಾಮಿ ನಿತ್ಯಾನಂದ ದೇಶ ಬಿಟ್ಟು ಪಲಾಯನಗೈದಿದ್ದು ಆತನ ವಿರುದ್ಧ ಸಾಕ್ಷಿ ಸಂಗ್ರಹಿಸಲು ಗುಜರಾತ್ ಪೊಲೀಸರು ಸತತ ಪ್ರಯತ್ನ ಮುಂದುವರಿಸಿದ್ದಾರೆ.

 
ನಿತ್ಯಾನಂದನ ಇಬ್ಬರು ಶಿಷ್ಯರನ್ನು ಈಗಾಗಲೇ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ತಮ್ಮ ಆಶ್ರಮವನ್ನು ನಡೆಸಲು ಅನುಯಾಯಿಗಳಿಂದ ಹಣ ಸಂಗ್ರಹಿಸಲು ಇಬ್ಬರು ಮಕ್ಕಳನ್ನು ಅಪಹರಿಸಿ ಬಂಧಿಸಿಟ್ಟ ಆರೋಪದ ಮೇಲೆ ಈಗಾಗಲೇ ನಿತ್ಯಾನಂದನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.


ನಿತ್ಯಾನಂದ ದೇಶ ಬಿಟ್ಟು ಹೋಗಿದ್ದು ಅಗತ್ಯಬಿದ್ದರೆ ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸುತ್ತಾರೆ ಎಂದು ಅಹ್ಮದಾಬಾದ್ ಗ್ರಾಮೀಣ ಎಸ್ ಪಿ ಆರ್ ವಿ ಅಸರಿ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಅತ್ಯಾಚಾರ ಆರೋಪದ ಮೇಲೆ ನಿತ್ಯಾನಂದನ ವಿರುದ್ಧ ಕೇಸು ದಾಖಲಿಸಲಾಗಿದ್ದು ಆತ ದೇಶ ಬಿಟ್ಟು ಪರಾರಿಯಾಗಿದ್ದಾನೆ, ಇಲ್ಲಿ ಆತನನ್ನು ಹುಡುಕುವುದು ಸಮಯ ವ್ಯರ್ಥ ಎಂದು ಅವರು ಹೇಳಿದರು.


ಅಗತ್ಯಬಿದ್ದರೆ ವಿದೇಶದ ಸೂಕ್ತ ಸಂಪರ್ಕದ ಮೂಲಕ ಆತನನ್ನು ಪತ್ತೆಹಚ್ಚಿ ಬಂಧಿಸಿ ಕರೆತರಲಾಗುವುದು ಎಂದು ಅಸರಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡೆ ಅಬ್ಬರ; ಜಿಂಬಾಬ್ವೆಗೆ 257 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

SCROLL FOR NEXT