ಮುಂಬೈ: ಮಹಾರಾಷ್ಟ್ರದಲ್ಲಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ರಾತ್ರೋರಾತ್ರಿ ಬಿಜೆಪಿ ಜೊತೆ ಸೇರಿ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದ ಎನ್ ಸಿಪಿ ನಾಯಕ ಅಜಿತ್ ಪವಾರ್ ಅವರನ್ನು ಎನ್ ಸಿಪಿ ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ಶನಿವಾರ ವಜಾಗೊಳಿಸಲಾಗಿದೆ.
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನೇತೃತ್ವದಲ್ಲಿ ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಜಿತ್ ಪವಾರ್ ಅವರನ್ನು ವಜಾಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇಂದು ಬೆಳಗ್ಗೆ ದೇವೇಂದ್ರ ಫಡ್ನವಿಸ್ ಅವರು ರಾಜ್ಯದ 19 ನೇ ಮುಖ್ಯಮಂತ್ರಿಯಾಗಿ ಹಾಗೂ ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಮುಖ್ಯಮಂತ್ರಿ ಫಡ್ನವಿಸ್ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಪ್ರಮಾಣವಚನ ಬೋಧಿಸಿದ್ದರು.