ದೇಶ

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ: ರಾಷ್ಟ್ರಪತಿ ಆಡಳಿತ ಹಿಂಪಡೆತ 

Sumana Upadhyaya

ನವದೆಹಲಿ: ರಾತ್ರೋರಾತ್ರಿ ನಡೆದ ರಾಜಕೀಯ ಬೆಳವಣಿಗೆ ನಂತರ ಶನಿವಾರ ಬೆಳಗ್ಗೆ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ ಸಿಪಿ ನೇತೃತ್ವದ ಸರ್ಕಾರ ರಚನೆಯಾಗಿದೆ. ಇದರಿಂದಾಗಿ 10 ದಿನಗಳ ಹಿಂದೆ ಹೇರಿಕೆಯಾಗಿದ್ದ ರಾಷ್ಟ್ರಪತಿ ಆಡಳಿತ ಇಂದು ಬೆಳಗ್ಗೆ 5.47ಕ್ಕೆ ಹಿಂಪಡೆಯಲಾಗಿದೆ. 


ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೃಹ ಸಚಿವಾಲಯಕ್ಕೆ ಅಧಿಸೂಚನೆ ಹೊರಡಿಸಿದ್ದು ರಾಷ್ಟ್ರಪತಿ ಆಡಳಿತವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಬಲ್ಲಾ ಇಂದು ಬೆಳಗ್ಗೆ 5.47ಕ್ಕೆ ಹೊರಡಿಸಿದ್ದಾರೆ.


ರಾಷ್ಟ್ರಪತಿ ಆಡಳಿತ ಹೇರಿಕೆ ಹಿಂಪಡೆದ ನಂತರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು.

SCROLL FOR NEXT