ದೇಶ

ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

Lingaraj Badiger

ನವದೆಹಲಿ: 2016ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಕೋರ್ಟ್ ಶನಿವಾರ ವಜಾಗೊಳಿಸಿದೆ.

ರಾಹುಲ್ ಗಾಂಧಿ ವಿರುದ್ಧದ ದೂರಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸಲ್ಲಿಸಿದ ಕ್ರಮ ಕೈಗೊಂಡ ವರದಿಯನ್ನು ಆಧರಿಸಿ ದೆಹಲಿ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿದೆ.

ಪ್ರಧಾನಿ ಮೋದಿ ಅವರ ವಿರುದ್ಧ ಹೇಳಿಕೆ ನೀಡಿದ ರಾಹುಲ್ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಕೋರಿ ವಕೀಲ ಜೋಗಿಂದರ್ ತುಲಿ ಅವರು ದೆಹಲಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಪ್ರಧಾನಿ ಮೋದಿ ಸೈನಿಕರ ತ್ಯಾಗ ಮತ್ತು ಬಲಿದಾನದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಸಂಬಂಧ ಜೋಗಿಂದರ್ ತುಲಿ ಅವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು.

SCROLL FOR NEXT