ದೇಶ

ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ: ಅಜಿತ್ ಪವಾರ್ ಹೇಳಿಕೆ ತಳ್ಳಿಹಾಕಿದ ಶರದ್ ಪವಾರ್

Lingaraj Badiger

ಮುಂಬೈ: ತನ್ನ ಸಹೋದರನ ಮಗ, ಎನ್ ಸಿಪಿ ಬಂಡಾಯ ನಾಯಕ ಅಜಿತ್ ಪವಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು, ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಭಾನುವಾರ ಹೇಳಿದ್ದಾರೆ.

ನಾನು ಎನ್ ಸಿಪಿ ಬಿಟ್ಟಿಲ್ಲ. ಎನ್ ಸಿಪಿಯಲ್ಲೇ ಇದ್ದೇನೆ. ಶರದ್ ಪವಾರ್ ಅವರೇ ನನ್ನ ನಾಯಕ. ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ ಸಿಪಿ ಸ್ಥಿರ ಸರ್ಕಾರ ನೀಡಲಿದೆ ಎಂಬ ಅಜಿತ್ ಪವಾರ್ ಅವರ ಹೇಳಿಕೆಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಶರದ್ ಪವಾರ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಶಿವಸೇನಾ, ಕಾಂಗ್ರೆಸ್ ಹಾಗೂ ಎನ್ ಸಿಪಿ ಮೈತ್ರಿಕೂಟ ಸರ್ಕಾರ ರಚಿಸುವ ಒಮ್ಮತದ ನಿರ್ಧಾರ ಕೈಗೊಂಡಿವೆ. ಅಜಿತ್ ಪವಾರ್ ಹೇಳಿಕೆ ತಪ್ಪು ಮತ್ತು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಜಿತ್ ಪವಾರ್ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಶರದ್ ಪವಾರ್ ಅವರು ಟ್ವೀಟ್ ಮಾಡಿದ್ದಾರೆ.

ಇದಕ್ಕು ಮುನ್ನ ಟ್ವೀಟ್ ಮಾಡಿದ್ದ ಅಜಿತ್ ಪವಾರ್, ನಾನು ಈಗಲೂ ಎನ್ ಸಿಪಿಯಲ್ಲಿಯೇ ಇದ್ದೇನೆ. ಮುಂದೆಯೂ ಕೂಡಾ ಎನ್ ಸಿಪಿಯಲ್ಲಿಯೇ ಇರುತ್ತೇನೆ. ಶರದ್ ಪವಾರ್ ನಮ್ಮ ನಾಯಕರು ಎಂದು ಹೇಳಿದ್ದರು. ಅಲ್ಲದೆ ಅಜಿತ್ ಪವಾರ್ ತಮ್ಮ ಟ್ವೀಟರ್ ಖಾತೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಎನ್ ಸಿಪಿ ಮುಖಂಡ ಎಂದು ಬದಲಾಯಿಸಿಕೊಂಡಿದ್ದಾರೆ.

SCROLL FOR NEXT