ರಾಹುಲ್ ಗಾಂಧಿ 
ದೇಶ

ಪ್ರಜಾಪ್ರಭುತ್ವದ ಕಗ್ಗೊಲೆ: ಮಹಾರಾಷ್ಟ್ರ ಸರ್ಕಾರ ರಚನೆ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರದಲ್ಲಿ ಬಿಜೆಪಿ ತರಾತುರಿಯಲ್ಲಿ ಸರ್ಕಾರ ರಚನೆ ಮಾಡಿದ ವಿಚಾರ ಲೋಕಸಭೆಯಲ್ಲಿ ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಯಿತು.

ನವದೆಹಲಿ: ಮಹಾರಾಷ್ಟ್ರದಲ್ಲಿ ಬಿಜೆಪಿ ತರಾತುರಿಯಲ್ಲಿ ಸರ್ಕಾರ ರಚನೆ ಮಾಡಿದ ವಿಚಾರ ಲೋಕಸಭೆಯಲ್ಲಿ ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಯಿತು. ಸಂಸತ್ತಿನ ಹೊರ ಭಾಗದಲ್ಲಿ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ, ಲೋಕಸಭೆ ಅಧಿವೇಶನದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ರಾಹುಲ್​ಗಾಂಧಿ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದರು.

ಲೋಕಸಭೆಯಲ್ಲಿ ಮಾತನಾಡಿದ ರಾಹುಲ್​ಗಾಂಧಿ, ನಾನು ಒಂದು ಪ್ರಶ್ನೆಯನ್ನೂ ಕೇಳುವುದಿತ್ತು. ಆದರೆ, ಅದನ್ನು ಕೇಳುವುದರಲ್ಲಿ ಯಾವುದೇ ಅರ್ಥವಿಲ್ಲ, ಏಕೆಂದರೆ, ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗಿದೆ ಎಂದರು.

ಎನ್​ಸಿಪಿಯ ಅಜಿತ್​ ಪವಾರ್​ ಜೊತೆ ಸೇರಿ ಮಾಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಿದ ವಿಚಾರದಲ್ಲಿ ಸೋನಿಯಾ ಗಾಂಧಿ ಮೌನ ಮುರಿದಿದ್ದಾರೆ. ಇಷ್ಟು ದಿನ ಈ ಬಗ್ಗೆ ಒಂದೂ ಮಾತನಾಡದ ಅವರು, ಇಂದು ಸಂಸತ್ತಿನ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರಜಾಪ್ರಭುತ್ವದ ಕೊಲೆ ಆಗಿದೆ ಎಂದರು.

ಕಾಂಗ್ರೆಸ್​ ನಾಯಕರು ಲೋಕಸಭೆಯಲ್ಲಿ ತೀವ್ರ ಗದ್ದಲ ನಡೆಸಿದರು. ‘ಸಂವಿಧಾನದ ಹತ್ಯೆ ನಿಲ್ಲಿಸಿ’ ಎಂದು ಕೂಗಾಟ ನಡೆಸಿದರು. ಹೀಗಾಗಿ ಲೋಕಸಭೆಯನ್ನು 12 ಗಂಟೆಯವರೆಗೆ ಹಾಗೂ ರಾಜ್ಯಸಭೆಯನ್ನು 2 ಗಂಟೆವರೆಗೆ ಮುಂದೂಡಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT