ರಾಜ್ಯಪಾಲರಿಗೆ ಸಲ್ಲಿಸಿದ ಪತ್ರ 
ದೇಶ

ನಮಗೆ ಸಾಕಷ್ಟು ಶಾಸಕರ ಬೆಂಬಲವಿದೆ, ಸರ್ಕಾರ ರಚಿಸಲು ಅವಕಾಶ ಕೊಡಿ: ರಾಜ್ಯಪಾಲರಿಗೆ 'ಮಹಾ ವಿಕಾಸ್ ಅಘಾಡಿ' ಪತ್ರ

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಪತ್ರ ಸಲ್ಲಿಸಿದ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ತಮಗೆ ಸರ್ಕಾರ ರಚಿಸಲು ಸಾಕಷ್ಟು ಶಾಸಕರ ಬೆಂಬಲವಿದೆ ಎಂದು ಪ್ರತಿಪಾದಿಸಿದ್ದಾರೆ.

ಮುಂಬೈ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಪತ್ರ ಸಲ್ಲಿಸಿದ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ತಮಗೆ ಸರ್ಕಾರ ರಚಿಸಲು ಸಾಕಷ್ಟು ಶಾಸಕರ ಬೆಂಬಲವಿದೆ ಎಂದು ಪ್ರತಿಪಾದಿಸಿದ್ದಾರೆ.


ಪತ್ರಕ್ಕೆ ಮೂರೂ ಪಕ್ಷಗಳ ಅಧ್ಯಕ್ಷರುಗಳಾದ ಏಕಾಂತ್ ಶಿಂಧೆ, ಜಯಂತ್ ಪಾಟೀಲ್ ಮತ್ತು ಬಾಳಾ ಸಾಹೇಬ್ ತೊರಟ್ ಸಹಿ ಹಾಕಿದ್ದಾರೆ. ಮೂರೂ ಪಕ್ಷಗಳು ಚುನಾವಣೋತ್ತರ ಮೈತ್ರಿ ಮಾಡಿಕೊಂಡ ಮಹಾ ವಿಕಾಸ್ ಅಘಾಡಿಗೆ ಬಹುಮತವಿದ್ದು ಇತ್ತೀಚೆಗೆ ಪ್ರಮಾಣವಚನ ಸ್ವೀಕರಿಸಿಕೊಂಡ ದೇವೇಂದ್ರ ಫಡ್ನವಿಸ್ ಅವರಿಗೆ ಸಾಕಷ್ಟು ಬಹುಮತವಿಲ್ಲ ಎಂದು ಪತ್ರದಲ್ಲಿ ವಿವರಿಸಿದ್ದಾರೆ.


ಶಿವಸೇನೆಗೆ ಬೆಂಬಲ ನೀಡಿರುವ ಎನ್ ಸಿಪಿ ಮತ್ತು ಕಾಂಗ್ರೆಸ್ ಶಾಸಕರ ಬೆಂಬಲ ಪತ್ರ ಜೊತೆಗೆ ಸಣ್ಣ ಪಕ್ಷಗಳ, ಸ್ವತಂತ್ರ ಶಾಸಕರ ಬೆಂಬಲ ಇರುವುದರಿಂದ ತಮಗೆ ಸರ್ಕಾರ ರಚಿಸಲು ಅವಕಾಶ ನೀಡಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ದಕ್ಷಿಣ ಕನ್ನಡ ಜಿಲ್ಲೆಗೆ 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣದ ಪ್ರಸ್ತಾವನೆ: ಸಾರ್ವಜನಿಕರಿಂದ ಆಕ್ಷೇಪಣೆಗೆ ಆಹ್ವಾನ

'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂಗೆ ಅರ್ಜಿ, 4 ಪ್ರಮುಖ ಪಕ್ಷಗಳು "ದೂರ ದೂರ"