370ನೇ ವಿಧಿ: ಕಾಶ್ಮೀರದಲ್ಲಿ ನಿರ್ಬಂಧ ಕುರಿತು ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್
ಜಮ್ಮು ಮತ್ತು ಕಾಶ್ಮೀರಕ್ಕೆ ಸ್ವಾಯತ್ತತೆ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ವಿಧಿಸಿರುವ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬುಧವಾರ ತೀರ್ಪು ಕಾಯ್ದರಿಸಿದೆ.
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸ್ವಾಯತ್ತತೆ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ವಿಧಿಸಿರುವ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಬುಧವಾರ ತೀರ್ಪು ಕಾಯ್ದರಿಸಿದೆ.
ಇಂದು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠ ತೀರ್ಪನ್ನು ಕಾಯ್ದರಿಸಿತು.
ಜಮ್ಮು ಕಾಶ್ಮೀರದಲ್ಲಿ ವಿಧಿಸಲಾಗಿರುವ ನಿರ್ಬಂಧ ಪ್ರಶ್ನಿಸಿ ಹಿರಿಯ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಮತ್ತು ಪತ್ರಕರ್ತ ಅನುರಾಧಾ ಬಸೀನ್ ಅರ್ಜಿ ಸಲ್ಲಿಸಿದ್ದು, ಸಂವಿಧಾನದ 370ನೇ ವಿಧಿ ರದ್ದತಿ ಕಾನೂನು ಬಾಹಿರವಾಗಿದ್ದು, ಅಲ್ಲಿ ನಿರ್ಬಂಧ ಹೇರಲು ಕೇಂದ್ರ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ವಾದಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಜಮ್ಮು ಕಾಶ್ಮೀರದಲ್ಲಿ ಶಾಂತಿ ಭಂಗವಾಗದಂತೆ ತಡೆಯಲು ಮಾತ್ರ ಅಲ್ಲಿನ ದೂರವಾಣಿ, ಮೊಬೈಲ್ ಸಂಪರ್ಕ ಮತ್ತಿತರ ಸಂಪರ್ಕವನ್ನು ಕಡಿತುಗೊಳಿಸಿ, ನಿರ್ಬಂಧ ವಿಧಿಸಲಾಗಿದೆ ಎಂದು ಸಮರ್ಥನೆ ನೀಡಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.