ಬಾಳಾಸಾಹೇಬ್ ಥೋರತ್ 
ದೇಶ

ಮೂರೂ ಪಕ್ಷಗಳು ಇನ್ನೆರಡು ದಿನಗಳಲ್ಲಿ ಖಾತೆ ಹಂಚಿಕೆ ನಿರ್ಧರಿಸಲಿವೆ: ಕಾಂಗ್ರೆಸ್ ಮುಖ್ಯಸ್ಥ ಬಾಳಾಸಾಹೇಬ್ ಥೋರತ್

ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಡುವೆ ಖಾತೆ ಹಂಚಿಕೆ ಇನ್ನು ಎರಡು ದಿನಗಳಲ್ಲಿ ತೀರ್ಮಾನವಾಗಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳಾ ಸಾಹೇಬ್ ಥೋರತ್ ತಿಳಿಸಿದ್ದಾರೆ. 

ಮುಂಬೈ: ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಡುವೆ ಖಾತೆ ಹಂಚಿಕೆ ಇನ್ನು ಎರಡು ದಿನಗಳಲ್ಲಿ ತೀರ್ಮಾನವಾಗಲಿದೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ಬಾಳಾ ಸಾಹೇಬ್ ಥೋರತ್ ತಿಳಿಸಿದ್ದಾರೆ.


ಮೂರೂ ಮೈತ್ರಿಕೂಟಗಳನ್ನು ಒಟ್ಟಾಗಿ ಮಹಾರಾಷ್ಟ್ರ ವಿಕಾಸ್ ಅಘಾಡಿ ಎಂದು ಕರೆಯಲಾಗುತ್ತಿದ್ದು ಇವುಗಳು ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಶಾಸಕರ ಸಹಾಯದಿಂದ ನಾಳೆ ಸರ್ಕಾರ ರಚಿಸಲಿದ್ದಾರೆ.


ಇಂದು ಶಾಸಕರ ಪ್ರಮಾಣವಚನ ಬಳಿಕ ಮುಂಬೈಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೆರಡು ದಿನಗಳಲ್ಲಿ ಯಾವ ಪಕ್ಷಗಳಿಗೆ ಎಷ್ಟು ಖಾತೆ ಎಂದು ಅಂತಿಮಗೊಳಿಸಲಾಗುವುದು. ಸಂಪುಟ ದರ್ಜೆ ಮತ್ತು ರಾಜ್ಯ ಸಚಿವ ಹುದ್ದೆಗಳನ್ನು ಪ್ರತಿ ಪಕ್ಷಗಳಿಗೆ ನೀಡಲಾಗುತ್ತದೆ ಎಂದರು.


ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಮುಂದಿನ ಮುಖ್ಯಮಂತ್ರಿಯಾಗಲಿದ್ದು, ನಾಳೆ ಸಂಜೆ ದಾದಾರ್ ನಲ್ಲಿರುವ ಶಿವಾಜಿ ಪಾರ್ಕ್ ನಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಭಾಗವಹಿಸುವುದು ಇನ್ನೂ ನಿರ್ಧಾರವಾಗಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ