ಕಮಲ್ ನಾಥ್ 
ದೇಶ

ಗೋಡ್ಸೆ ದೇಶಭಕ್ತ ಎಂದ ಪ್ರಗ್ಯಾ ವಿರುದ್ಧ ಕ್ರಮ ತೆಗೆದುಕೊಳ್ಳಿ: ಬಿಜೆಪಿಗೆ ಮಧ್ಯ ಪ್ರದೇಶ ಸಿಎಂ ಆಗ್ರಹ

ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಕೊಂದ ನಾಥುರಾಮ್‌ ಗೋಡ್ಸೆಯನ್ನು ಮತ್ತೆ ದೇಶಭಕ್ತ ಎಂದು ಕರೆದ ಬಿಜೆಪಿ ಭೋಪಾಲ್ ಸಂಸದೆ ಪ್ರಗ್ಯಾ ಠಾಕೂರ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ಬಿಜೆಪಿ ಆಗ್ರಹಿಸಿದ್ದಾರೆ.

ಭೋಪಾಲ್: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಕೊಂದ ನಾಥುರಾಮ್‌ ಗೋಡ್ಸೆಯನ್ನು ಮತ್ತೆ ದೇಶಭಕ್ತ ಎಂದು ಕರೆದ ಬಿಜೆಪಿ ಭೋಪಾಲ್ ಸಂಸದೆ ಪ್ರಗ್ಯಾ ಠಾಕೂರ್ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ಬಿಜೆಪಿಗೆ ಆಗ್ರಹಿಸಿದ್ದಾರೆ.

ನಾಥುರಾಮ್‌ ಗೋಡ್ಸೆ ವಿಚಾರದಲ್ಲಿ ಬಿಜೆಪಿ ತನ್ನ ನಿಲುವು ಸ್ಪಷ್ಟಪಡಿಸಬೇಕು ಎಂದು ಕಮಲ್ ನಾಥ್ ಅವರು ಸರಣಿ ಟ್ವೀಟ್ ಮಾಡಿದ್ದಾರೆ,

ಗೋಡ್ಸೆ ದೇಶಭಕ್ತ ಎಂದ ಪ್ರಗ್ಯಾ ಠಾಕೂರ್ ಅವರನ್ನು ಕ್ಷಮಿಸುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ಆದರೆ ಈ ಬಾರಿ ಪ್ರಜಾಪ್ರಭುತ್ವದ ದೇಗುಲ ಲೋಕಸಭೆಯಲ್ಲೇ ಪ್ರಗ್ಯಾ ಠಾಕೂರ್ ಗಾಂಧಿ ಹಂತಕನನ್ನು ದೇಶಭಕ್ತ ಎಂದು ಕೊಂಡಾಡಿರುವುದನ್ನು ಮೋದಿ ಮರೆಯಬಾರದು ಎಂದು ಕಮಲ್ ನಾಥ್ ಟ್ವೀಟ್ ಮಾಡಿದ್ದಾರೆ.

ದೇಶದ ಜನತೆ ಪ್ರಗ್ಯಾ ಸಿಂಗ್ ಹೇಳಿಕೆಯನ್ನು ಮರೆಯುವುದಿಲ್ಲ ಮತ್ತು ಬಿಜೆಪಿ ಗಾಂಧಿ ಜತೆ ಇದೆಯೇ ಅಥವಾ ಗೋಡ್ಸೆ ಜತೆ ಇದೆಯೇ? ಎಂಬುದು ತಿಳಿಯಲು ಬಯಸುತ್ತಾರೆ ಎಂದು ಮಧ್ಯ ಪ್ರದೇಶ ಸಿಎಂ ಮತ್ತೊಂದು ಟ್ವೀಟ್ ಮಾಡಿದ್ದಾರೆ.

ಇಂದು ಲೋಕಸಭೆಯಲ್ಲಿ ಎಸ್​ಪಿಜಿ(ತಿದ್ದುಪಡಿ) ಕಾಯ್ದೆ ಮೇಲಿನ ಚರ್ಚೆ ವೇಳೆ ಡಿಎಂಕೆ ಸಂಸದ ಎ ರಾಜಾ ಅವರು ಗೋಡ್ಸೆ ಮಹಾತ್ಮ ಗಾಂಧಿಯನ್ನು ಏಕೆ ಕೊಂದರು ಎಂದು ವಿವರಿಸಿದಾಗ, ದೇಶಭಕ್ತರನ್ನು ನೀವು ಉದಾಹರಣೆಯಾಗಿ ಕೊಡಬೇಡಿ ಎಂದು ಪ್ರಗ್ಯಾ ಠಾಕೂರ್, ರಾಜಾ ಅವರಿಗೆ ಹೇಳಿದರು.

ಗೋಡ್ಸೆ 32 ವರ್ಷಗಳಿಂದಲೂ ಗಾಂಧೀಜಿ ಮೇಲೆ ದ್ವೇಷ ಸಾಧಿಸುತ್ತಾ ಕೊನೆಗೆ ಹತ್ಯೆಗೈಯಲು ತಾನೇ ನಿರ್ಧರಿಸಿದ್ದ. ಗೋಡ್ಸೆ ಹೊಂದಿದ್ದ ಪ್ರತ್ಯೇಕ ಸಿದ್ಧಾಂತದಿಂದಾಗಿ ಗಾಂಧಿಯನ್ನು ಹತ್ಯೆ ಮಾಡಿದ ಎಂದು ಸಂಸದ ಎ.ರಾಜಾ ಹೇಳಿದರು. ಈ ವೇಳೆ ಪ್ರಗ್ಯಾ ಠಾಕೂರ್ ಮಧ್ಯೆ ಪ್ರವೇಶಿಸಿ, ಗೋಡ್ಸೆ ಒಬ್ಬ ದೇಶಭಕ್ತ ಅವರನ್ನು ಉದಾಹರಣೆಯಾಗಿ ಕೊಡಬೇಡಿ ಎಂದರು. 

ಬಿಜೆಪಿ ಸಂಸದೆಯ ಈ ಹೇಳಿಕೆಯನ್ನು ಖಂಡಿಸಿ ಪ್ರತಿಪಕ್ಷಗಳು ಸದನದಲ್ಲಿ ಪ್ರತಿಭಟನೆ ನಡೆಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ