ದೇಶ

ಸುಪ್ರೀಂಕೋರ್ಟ್ ನಲ್ಲಿ ಚಿದಂಬರಂ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದ ಇಡಿ

Lingaraj Badiger

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಪಿ ಚಿದಂಬರಂ ಅವರಿಗೆ ಜಾಮೀನು ನೀಡದಂತೆ ಸುಪ್ರೀಂಕೋರ್ಟ್ ಗೆ ಇಡಿ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಕೇಂದ್ರ ಮಾಜಿ ಸಚಿವ ಪಿ. ಚಿದಂಬರಂಗೆ ಜಾಮೀನು ನೀಡಬಾರದು. ಅವರಿಗೆ ಜಾಮೀನು ಕೊಟ್ಟರೆ ಸಾಕ್ಷ್ಯಾಧಾರಗಳು ನಾಶವಾಗುವ ಆತಂಕ ಇದೆ ಎಂದು ಇಡಿ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.

ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಆರ್. ಭಾನುಮತಿ ನೇತೃತ್ವದ ಪೀಠ ನಡೆಸುತ್ತಿದೆ.

ಇಂದು ಪೀಠದ ಮುಂದೆ ಇಡಿ ಪರ ಸಾಲಿಸಿಟಿರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿ, ಜೈಲಿನಿಂದಲೇ ಚಿದಂಬರಂ ಪ್ರಕರಣಗಳ ಸಾಕ್ಷಿಗಳ ನಾಶಕ್ಕೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಒಂದು ವೇಳೆ ಜಾಮೀನು ದೊರಕಿ, ಜೈಲಿನಿಂದ ಹೊರಗೆ ಬಂದರೆ ಅವರು ಸಾಕ್ಷಿಗಳ ಮೇಲೆ ತಮ್ಮದೇ ಆದ ಪ್ರಭಾವ ಬೀರಲಿದ್ದಾರೆ ಎಂದು ವಾದ ಮಾಡಿ, ಜಾಮೀನು ನೀಡಬಾರದು ಎಂದು ಮನವಿ ಮಾಡಿದರು.

ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಚಿದಂಬರಂ ಅವರ ಜಾಮೀನು ಮನವಿಯನ್ನು ತಿರಸ್ಕರಿಸಿದ್ದು, ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

SCROLL FOR NEXT