ದೇಶ

'ಮಹಾ' ಸಿಎಂ ಆಗಿ ಉದ್ದವ್ ಪ್ರಮಾಣ ವಚನ; ಪ್ರಧಾನಿ ಮೋದಿ, ಸೋನಿಯಾ, ಡಾ. ಸಿಂಗ್ ಗೆ ಆಹ್ವಾನ

Srinivasamurthy VN

ಮುಂಬೈ: ಮಹಾರಾಷ್ಟ್ರದ ನೂತನ ಸಿಎಂ ಆಗಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ನಿನ್ನೆ ರಾತ್ರಿ ಖುದ್ಧು ಉದ್ಧವ್ ಠಾಕ್ರೆ ಅವರು ಪ್ರಧಾನಿ ಮೋದಿ ಅವರಿಗೆ ಕರೆ ಮಾಡಿದ್ದು, ಈ ವೇಳೆ ಪ್ರಧಾನಿ ಮೋದಿ ಉದ್ಧವ್ ಠಾಕ್ರೆ ಅವರಿಗೆ ಶುಭಕೋರಿದ್ದಾರೆ. ಇದೇ ಸಂದರ್ಭದಲ್ಲಿ ಉದ್ಧವ್ ಠಾಕ್ರೆ ತಮ್ಮ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ಕೂಡ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಇತ್ತ ಉದ್ಧವ್ ಠಾಕ್ರೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಸ್ವತಃ ಉದ್ಧವ್ ಠಾಕ್ರೆ ಪುತ್ರ ಆದಿತ್ಯಾ ಠಾಕ್ರೆ ದೆಹಲಿಗೆ ತೆರಳಿ ಗಣ್ಯರಿಗೆ ಆಹ್ವಾನ ನೀಡಿದ್ದಾರೆ. ಪ್ರಮುಖವಾಗಿ ಎನ್ ಸಿಪಿ ಮುಖಂಡ ಶರದ್ ಪವಾರ್, ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಮತ್ತು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಸೇರಿದಂತೆ ಹಲವು ಗಣ್ಯರಿಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.

ಅಲ್ಲದೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವರಿಗೆ ಅಹ್ವಾನ ನೀಡಲಾಗಿದೆ ಎಂದು ತಿಳಿದುಬಂದಿದೆ.

SCROLL FOR NEXT